ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ಏಕೆ ಸ್ಪರ್ಧಿಸುತ್ತಿಲ್ಲ, ಈ ಕುರಿತು ರಾಹುಲ್ ಗಾಂಧಿ ಹೇಳಿದ್ದೇನು?

|

Updated on: Apr 17, 2024 | 1:59 PM

2019ರ ಬದಲು ಕಾಂಗ್ರೆಸ್​ ಭದ್ರಕೋಟೆಯಾಗಿದ್ದ ಅಮೇಥಿ ಈಗ ಬಿಜೆಪಿ ಪಾಲಾಗಿದೆ. ಆದರೆ, ರಾಯ್​ಬರೇಲಿ ಹಾಗೂ ಅಮೇಥಿಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಈ ಬಾರಿಯೂ ಬಿಜೆಪಿ ಈ ಕ್ಷೇತ್ರದಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ಏಕೆ ಸ್ಪರ್ಧಿಸುತ್ತಿಲ್ಲ, ಈ ಕುರಿತು ರಾಹುಲ್ ಗಾಂಧಿ ಹೇಳಿದ್ದೇನು?
ರಾಹುಲ್ ಗಾಂಧಿ
Follow us on

ಮುಂಬರುವ ಲೋಕಸಭಾ ಚುನಾವಣೆ(Lok Sabha Eelction)ಯಲ್ಲಿ ರಾಹುಲ್​ ಗಾಂಧಿ(Rahul Gandhi) ಅಮೇಥಿ(Amethi)ಯಿಂದ ಯಾಕೆ ಸ್ಪರ್ಧಿಸುತ್ತಿಲ್ಲ ಎಂಬುದರ ಕುರಿತು ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ. ನನಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಯಾವ ಆದೇಶ ಬರುತ್ತದೋ ನಾನು ಹಾಗೆ ನಡೆದುಕೊಳ್ಳುತ್ತೇನೆ, ಈ ಬಗ್ಗೆ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ, ಸಮಾಜವಾದಿ ಪಕ್ಷದ ನಾಯಕ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆಯಲ್ಲಿದ್ದರು. ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಚುನಾವಣೆ ಮಾತನಾಡಿದರು.

ಪ್ರಧಾನಿಯಾಗಲು ನಾಯಕರು ಗುಜರಾತ್ ಬಿಟ್ಟು ಉತ್ತರ ಪ್ರದೇಶದ ಬನಾರಸ್‌ಗೆ ಬರುತ್ತಾರೆ, ಆದರೆ ನೀವು ಅಮೇಥಿ ಬಿಟ್ಟು ವಯನಾಡಿಗೆ ಹೋಗಿದ್ದೀರಾ ಎಂದು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದರು. ಆಗ ರಾಹುಲ್​ ಗಾಂಧಿ ಇದು ಬಿಜೆಪಿಯ ಪ್ರಶ್ನೆ ಎಂದು ಲೇವಡಿ ಮಾಡಿದರು. ಹಾಗೆಯೇ ಮಾತು ಮುಂದುವರೆಸಿ ಕಾಂಗ್ರೆಸ್​ ಪಕ್ಷ ಏನು ಹೇಳುತ್ತದೋ ನಾನು ಅದನ್ನು ಕೇಳುತ್ತೇನೆ ಎಂದರು.

ಅಮೇಥಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾರ ಪತಿ ರಾಬರ್ಟ್​ ವಾದ್ರಾ ಕಣಕ್ಕಿಳಿಯಬಹುದು ಎನ್ನುವ ಸುದ್ದಿ ಕೇಳಿಬಂದಿತ್ತು.
ರಾಹುಲ್ ಗಾಂಧಿ ಅವರು 2019 ರಲ್ಲಿ ಕೇರಳದ ವಯನಾಡ್‌ನಿಂದ ಚುನಾವಣೆಯಲ್ಲಿ ಗೆದ್ದಿದ್ದರು. ಅವರನ್ನು ಕ್ಷೇತ್ರದಿಂದ ಕಾಂಗ್ರೆಸ್ ಮತ್ತೆ ಈ ಕ್ಷೇತ್ರಕ್ಕೆ ರಾಹುಲ್ ಗಾಂಧಿಯನ್ನೇ ಹೆಸರಿಸಿದೆ.

ಮತ್ತಷ್ಟು ಓದಿ: ಇಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ: ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

ಅಮೇಥಿ ಹಾಗೂ ವಯನಾಡು ಎರಡಕ್ಕೂ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿವೆ.