Lok Sabha Election Results: ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಮ್​ ವಿಲಾಸ್​ ಪಾಸ್ವಾನ್ ಅವರು ಎಲ್​ಜೆಪಿ ಪಕ್ಷವು ಐದಕ್ಕೆ ಐದೂ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

Lok Sabha Election Results: ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ
ಚಿರಾಗ್ ಪಾಸ್ವಾನ್
Follow us
ನಯನಾ ರಾಜೀವ್
|

Updated on: Jun 05, 2024 | 10:07 AM

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಎಲ್​ಜೆಪಿಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು ರಾಮ್​ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದಿದ್ದರೂ ಎನ್​ಡಿಎ ಬಹುಮತದ ಗಡಿ ದಾಟಿದೆ.

2019ರ ಚುನಾವಣೆಯಲ್ಲಿ ಕೂಡಾ ರಾಮ್​ವಿಲಾಸ್ ಪಾಸ್ವಾನ್ ನೇತೃತ್ವದಲ್ಲಿ ಎಲ್​ಜೆಪಿ, ಎನ್​ಡಿಎ ಸೀಟು ಹೊಂದಾಣಿಕೆಯಡಿ ಹಂಚಿಕೆಯಾಗಿದ್ದ ಎಲ್ಲಾ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಎಲ್​ಜೆಪಿ ಹಾಜಿಪುರ, ವೈಶಾಲಿ, ಸಮಷ್ಟಿಪುರ, ಖಗಾರಿಯಾ ಹಾಗೂ ಜಮುಯಿ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಹಾಗೆಯೇ ಪ್ರತಿಪಕ್ಷಗಳ ಮೈತ್ರಿ ಕೂಟ ಇಂಡಿ ಬಲವನ್ನು ಪಡೆದುಕೊಂಡಿದೆ. ಬಿಹಾರದಲ್ಲಿ ಎನ್​ಡಿಎ 40ರಲ್ಲಿ 30 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ 12 ಸ್ಥಾನಗಳು, ಜನತಾದಳ ಯುನೈಟೆಡ್ 12 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ(ರಾಮ್​ವಿಲಾಸ್ ಪಾಸ್ವಾನ್) 5 ಸ್ಥಾನಗಳನ್ನು ಪಡೆದಿದೆ ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ 1 ಸ್ಥಾನವನ್ನು ಪಡೆದುಕೊಂಡಿದೆ.

ಮತ್ತಷ್ಟು ಓದಿ: ನಿತೀಶ್ ಕುಮಾರ್​​ಗೆ ಕರೆ ಮಾಡಿದ್ದೀರಾ?; ಶರದ್ ಪವಾರ್ ಹೇಳಿದ್ದೇನು?

ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದ ಬಿಜೆಪಿ 17 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆದ್ದಿದೆ. ಮತ್ತೊಂದೆಡೆ ನಿತೀಶ್​ ಕುಮಾರ್ ಅವರ ಜನತಾದಳ ಯುನೈಟೆಡ್ 16 ಸ್ಥಾನಗಳಲ್ಲಿ ಸ್ಪರ್ಧಿಸಿ 12ರಲ್ಲಿ ಗೆದ್ದಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷದಲ್ಲಿ ಅವರು 5 ಸ್ಥಾನಗಳಲ್ಲಿ ಸ್ಪರ್ಧಿಸಿ ಎಲ್ಲವನ್ನೂ ಗೆದ್ದುಕೊಂಡಿದ್ದಾರೆ.

ಬಿಹಾರದ ಪೂರ್ಣಿಯಾ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ರಾಜೇಶ್​ ರಂಜನ್​ ಅಲಿಯಾಸ್ ಪಪ್ಪು ಯಾದವ್ 23,000ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಯಾದವ್ ಅವರು ತಮ್ಮ ಜನ ಅಧಿಕಾರವನ್ನು ಕಾಂಗ್ರೆಸ್​ನೊಂದಿಗೆ ವಿಲೀನಗೊಳಿಸಿದ್ದರು. ಆದರೆ ಮಿತ್ರಪಕ್ಷವಾದ ಆರ್​ಜೆಡಿ ಏಕಪಕ್ಷೀಯವಾಗಿ ಜೆಡಿಯುನಿಂದ ಬೇರ್ಪಟ್ಟಾಗ ಮತ್ತು ಶಾಸಕಿ ಬಿಮಾ ಭಾರತಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದಾದ ಪೂರ್ಣಿಯಾದಿಂದ ಸ್ಪರ್ಧಿಸುವ ನಿರೀಕ್ಷೆ ಹುಸಿಯಾಯಿತು.

ಭಾರ್ತಿ ಮೂರನೇ ಬಾರಿಗೆ ಠೇವಣಿ ಕಳೆದುಕೊಂಡರೆ, ಯಾದವ್ ಅವರು 5.67 ಲಕ್ಷ ಮತಗಳನ್ನು ಪಡೆದರು. ಇದು ಜೆಡಿಯು ಹಾಲಿ ಸಂಸದ ಸಂತೋಷ್​ಕುಮಾರ್ ಅವರಿಗಿಂತ 23847 ಹೆಚ್ಚು. 1990ರ ದಶಕದಲ್ಲಿ ಪಪ್ಪು ಯಾದವ್ ಈ ಸ್ಥಾನದಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್