ಜೂನ್​ 8ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಜೂನ್​ 8ರಂದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಮಂಗಳವಾರ ಪ್ರಕಟವಾಗಿರುವ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಗಳಿಸುವ ಮೂಲಕ ಸರಳ ಬಹುಮತ ಪಡೆದಿದೆ.

ಜೂನ್​ 8ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Jun 05, 2024 | 2:12 PM

2024ರ ಲೋಕಸಭೆ ಚುನಾವಣೆ ಫಲಿತಾಂಶ(Lok Sabha Election Result)ದಲ್ಲಿ ಎನ್‌ಡಿಎ(NDA) ಬಹುಮತ ಪಡೆದಿದೆ. ಬಹುಮತ ಪಡೆದ ನಂತರ ಸರ್ಕಾರ ರಚನೆಯ ಪ್ರಯತ್ನಗಳು ತೀವ್ರಗೊಂಡಿವೆ. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಇದೇ ಜೂನ್ 8 ರ ಶನಿವಾರದಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಸಂಜೆ 4 ಗಂಟೆಗೆ ಎನ್​ಡಿಎ ಸಭೆ ನಡೆಯಲಿದೆ, 2024ರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಎನ್‌ಡಿಎ ಬಹುಮತ ಪಡೆದಿದೆ. ಬಹುಮತ ಪಡೆದ ನಂತರ ಸರ್ಕಾರ ರಚನೆಯ ಪ್ರಯತ್ನಗಳು ತೀವ್ರಗೊಂಡಿವೆ. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಇದೇ ಜೂನ್ 8 ರ ಶನಿವಾರದಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ.

2014 ರ ನಂತರ, ಅವರು 2019 ರಲ್ಲಿ ಮತ್ತು ಈಗ 2024 ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದಿತ್ತು. ಅದರ ನಂತರ ನರೇಂದ್ರ ಮೋದಿ 30 ಮೇ 2019 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಜೆಡಿಯು ಮುಖ್ಯಸ್ಥ ನಿತೀಶ್​ ಕುಮಾರ್, ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು ಹಾಗೂ ಇತರೆ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ಓದಿ: ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್​ ಕುಮಾರ್, ತೇಜಸ್ವಿ ಯಾದವ್

ಎನ್​ಡಿಎ ಮಿತ್ರಪಕ್ಷಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಇದರಲ್ಲಿ ಸರ್ಕಾರ ರಚನೆ ಮತ್ತು ಪ್ರಮಾಣವಚನದ ರೂಪುರೇಷೆ ಕುರಿತು ಚರ್ಚೆ ನಡೆಯಲಿದೆ.

2019ರಲ್ಲಿ ಫಲಿತಾಂಶ ಬಂದು 7 ದಿನಗಳ ಬಳಿಕ ಪ್ರಧಾನಿ ಪ್ರಮಾಣವಚನ ಸ್ವೀಕರಿಸಿದ್ದರು. 2014ರಲ್ಲಿ ಎನ್​ಡಿಎ ಸರ್ಕಾರ ರಚನೆಯಾದಾಗ 10 ದಿನಗಳ ನಂತರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಬಾರಿ ಫಲಿತಾಂಶ ಘೋಷಣೆಯಾಗಿ 4 ದಿನಗಳಲ್ಲೇ ಅಂದರೆ ಜೂನ್ 8ರಂದು ಪ್ರಮಾಣವಚನಕ್ಕೆ ಸಿದ್ಧತೆ ನಡೆದಿದೆ.

ಬಿಜೆಪಿ ನೇತೃತ್ವದ ಎನ್​ಡಿಎ 292 ಸ್ಥಾನಗಳನ್ನು ಗೆದ್ದಿದೆ, ಪ್ರತಿಪಕ್ಷಗಳ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ ಏಕಾಂಗಿಯಾಗಿ 240 ಸ್ಥಾನಗಳನ್ನು ಗೆದ್ದಿದೆ. 2014ರ ಚುನಾವಣೆಯಲ್ಲಿ ಮೋದಿ ನೇತೃತ್ವದಲ್ಲಿ 282 ಸ್ಥಾನಗಳನ್ನು ಗೆದ್ದ ಬಿಜೆಪಿ 2019ರಲ್ಲಿ 303 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಿತ್ತು. ಈ ಬಾರಿ ಮಿತ್ರಪಕ್ಷಗಳನ್ನು ಸೇರಿಸಿ ಬಹುಮತವನ್ನು ಪಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Wed, 5 June 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ