Lok Sabha Election Results 2024: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

Lok Sabha Election Results 2024: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ
ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ
Follow us
|

Updated on:Jun 05, 2024 | 3:30 PM

ದೆಹಲಿ ಜೂ.5: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂದಿನ ಹೊಸ ಸರ್ಕಾರ ರಚನೆ ಆಗುವವರೆಗೆ ನೀವು ಮತ್ತು ನಿಮ್ಮ ಸಚಿವ ಸಂಪುಟ ಮುಂದುವರಿಯುವಂತೆ ಮನವಿ ಮಾಡಿದ್ದಾರೆ. ಬಿಜೆಪಿಗೆ ಬಹುಮತವಿಲ್ಲದ ಕಾರಣ ತನ್ನ ಸ್ಥಾನಕ್ಕೆ ಮೋದಿ ಅವರು ರಾಜೀನಾಮೆ ನೀಡಬೇಕು.

2024ರ ಚುನಾವಣೆಯೂ 2014 ರಿಂದ 2019 ರವರೆಗೆ ನಡೆದ 17 ನೇ ಲೋಕಸಭೆಯ ವಿಸರ್ಜನೆಗೆ ದಾರಿ ಮಾಡಿಕೊಡಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಜೂನ್ 16 ಕ್ಕೆ ಅಂತ್ಯಗೊಳ್ಳುವ ಸಂಪುಟವನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಇದರ ಜತೆಗೆ ಗೃಹ ಸಚಿವ ಅಮಿತ್​​​​​ ಇಂದು ಎಲ್ಲರೂ ಎನ್​​ಡಿಎ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಮೂಲಗಳ ಪ್ರಕಾರ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ಇದೀಗ ಕಿಂಗ್​​ಮೇಕರ್‌ ಆಗಿದ್ದು, ಸರ್ಕಾರ ರಚನೆ ಮಾಡಲು ಅವರ ಬೆಂಬಲ ಅಗತ್ಯವಾಗಿದೆ. ಇದೀಗ ಮೋದಿ ಅವರು ಸರ್ಕಾರ ರಚನೆ ಮಾಡಲು ಅವರ ಬೆಂಬಲ ಸಿಕ್ಕಿದೆ. ಇನ್ನು 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂ.8ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ಹೊಣೆಹೊತ್ತು ಡಿಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ

ಇಂದು ನಡೆಯಲಿರುವ ಎನ್​​ಡಿಎ ಸಭೆಯಲ್ಲಿ ಎರಡೂ ಪಕ್ಷಗಳು ಬಿಜೆಪಿಗೆ ಅಧಿಕೃತ ಬೆಂಬಲ ಪತ್ರವನ್ನು ಸಲ್ಲಿಸುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್​​ಡಿಎ ಒಕ್ಕೂಟದ ಹೊಸದಾಗಿ ಆಯ್ಕೆಯಾದ ಸಂಸದರ ಸಭೆ ಜೂನ್ 7 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಎನ್‌ಡಿಎ ಸರ್ಕಾರ ರಚನೆ ಕುರಿತು ಚರ್ಚೆ ನಡೆಯಲಿದೆ.

ಲೋಕಸಭಾ ಚುನಾವಣೆಯ ಫಲಿತಾಂಶಗಳ ಪ್ರಕಾರ, ಭಾರತೀಯ ಚುನಾವಣಾ ಆಯೋಗವು 543 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 240 ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 2014 ಮತ್ತು 2019ಕ್ಕೆ ಹೊಲಿಸಿದ್ದರೆ ಈ ಬಾರಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದಿದೆ. ಇನ್ನು ಇಂಡಿಯಾ ಮೈತ್ರಿಕೂಟ ಮತ್ತೊಂದು ಕಡೆ ಸರ್ಕಾರ ರಚನೆಗೆ ಸರ್ಕಸ್​​​ ಮಾಡುತ್ತಿದೆ. ಈಗಾಗಲೇ ನಿತೀಶ್​​​​ ಕುಮಾರ್​​ ಮತ್ತು ತೇಜಸ್ವಿ ಯಾಧವ್​​​​ ಜೊತೆಯಾಗಿ ಒಂದೇ ವಿಮಾನದಲ್ಲಿ ದೆಹಲಿಗೆ ಬಂದಿರುವುದು ಹಲವು ಚರ್ಚೆಗೆ ಕಾರಣವಾಗಿದೆ.

ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್(Devendra Fadnavis) ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ 9ಕ್ಕೆ ಕುಸಿದಿದೆ. ರಾಜ್ಯದ ಬಿಜೆಪಿ ನಾಯಕತ್ವದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕ್ಷಮತೆಯನ್ನು ಸುಧಾರಿಸಲು ನಾನು ಸಂಘಟನಾ ಮಟ್ಟದಲ್ಲಿ ಕೆಲಸ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Wed, 5 June 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ