ವಯನಾಡು ತೊರೆದು ರಾಯ್​ಬರೇಲಿ ಸಂಸದರಾಗಿ ಉಳಿಯಲಿದ್ದಾರಾ ರಾಹುಲ್ ಗಾಂಧಿ?

ಕಾಂಗ್ರೆಸ್​ ನಾಯಕರ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್​ಬರೇಲಿ ಹಾಗೂ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೆಂಬ ಗೊಂದಲ ಎದುರಾಗಿದೆ. ಆದರೆ ರಾಹುಲ್ ರಾಯ್​ಬರೇಲಿಯನ್ನು ಉಳಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಯನಾಡು ತೊರೆದು ರಾಯ್​ಬರೇಲಿ ಸಂಸದರಾಗಿ ಉಳಿಯಲಿದ್ದಾರಾ ರಾಹುಲ್ ಗಾಂಧಿ?
ನರೇಂದ್ರ ಮೋದಿ

Updated on: Jun 09, 2024 | 11:39 AM

ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ(Rahul Gandhi) ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್​ಬರೇಲಿಯಲ್ಲಿ ಎರಡೂ ಕಡೆ ಗೆಲುವು ಸಾಧಿಸಿದ್ದಾರೆ. ರಾಹುಲ್​ ಗಾಂಧಿ ವಯನಾಡ್​ ಬಿಟ್ಟು ರಾಯ್​ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್​ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
ಜೂನ್ 17ಕ್ಕೂ ಮುನ್ನ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡಿನ ಸಂಸದರಾಗಿದ್ದು, ವಯನಾಡಿನ ಜನತೆ ಅವರನ್ನು ತಮ್ಮ ಪ್ರತಿನಿಧಿಯನ್ನಾಗಿ ಬಯಸುತ್ತಿದ್ದಾರೆ. ಆದರೆ, ರಾಯ್​ಬರೇಲಿ ಸೀಟು ಉಳಿಸಿಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ ಸರ್ವಾನುಮತದಿಂದ ಮನವಿ ಮಾಡಿದೆ. ಒಬ್ಬರು ಕೇವಲ ಒಂದು ಕಡೆ ಮಾತ್ರ ಸಂಸದರಾಗಿ ಮುಂದುವರೆಯಬಹುದು ಎಂಬುದು ಸ್ಪಷ್ಟವಾಗಿದೆ.

ಕೇರಳದ ಕಾಂಗ್ರೆಸ್ ನಾಯಕರು ವಯನಾಡ್ ಅನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧಿಯವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ರಾಯ್‌ಬರೇಲಿ ಅಥವಾ ವಯನಾಡ್?; ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ರಾಹುಲ್ ಗಾಂಧಿ

ತಮ್ಮ ತಾಯಿ ಸೋನಿಯಾ ಗಾಂಧಿ ಈವರೆಗೆ ಪ್ರತಿನಿಧಿಸುತ್ತಿದ್ದ ರಾಯ್​ ಬರೇಲಿಯಲ್ಲಿ ಈ ಬಾರಿ ರಾಹುಲ್ ಗಾಂಧಿ 6,87,649 ಮತಗಳನ್ನು ಗಳಿಸಿ ಕೇವಲ 2,97,619 ಮತ ಗಳಿಸಿದ ಬಿಜೆಪಿಯ ದಿನೇಶ್​ ಪ್ರತಾಪ್ ಸಿಂಗ್ ಅವರನ್ನು 3,90,030 ಮತಗಳಿಂದ ಭರ್ಜರಿಯಾಗಿ ಸೋಲಿಸಿದ್ದಾರೆ.

ಈಗ ಕಾಂಗ್ರೆಸ್​ನೊಳಗೆ ರಾಹುಲ್ ಗಾಂಧಿ ಯಾವ ಕ್ಷೇತ್ರ ಉಳಿಸಿಕೊಳ್ಳಬೇಕು ಎಂಬ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಮೂಲಗಳ ಪ್ರಕಾರ ಕೇರಳ ಸಂಸದರು ಹಾಗೂ ಅಲ್ಲಿನ ಪಕ್ಷದ ನಾಯಕರನ್ನು ಬಿಟ್ಟರೆ ಉಳಿದವರೆಲ್ಲರೂ ರಾಹುಲ್ ಗಾಂಧಿರಾಯ್​ ಬರೇಲಿಯನ್ನು ಉಳಿಸಿಕೊಳ್ಳಬೇಕೆಂದೇ ಹೇಳುತ್ತಿದ್ದಾರೆ.

ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us