ಲೋಕಸಭಾ ಚುನಾವಣೆಯಲ್ಲಿ ಎನ್​ಸಿಪಿಯ ಕಳಪೆ ಪ್ರದರ್ಶನದ ಹೊಣೆ ಹೊತ್ತುಕೊಂಡ ಅಜಿತ್ ಪವಾರ್

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆಯನ್ನು ಪರಿಶೀಲಿಸಲು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗುರುವಾರ ಸಭೆ ನಡೆಸಿದರು. ದಕ್ಷಿಣ ಮುಂಬೈನ ದೇವಗಿರಿಯಲ್ಲಿರುವ ಪಕ್ಷದ ನಿವಾಸದಲ್ಲಿ ಸಭೆ ನಡೆದಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮವಾಗಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎನ್​ಸಿಪಿಯ ಕಳಪೆ ಪ್ರದರ್ಶನದ ಹೊಣೆ ಹೊತ್ತುಕೊಂಡ ಅಜಿತ್ ಪವಾರ್
ಅಜಿತ್ ಪವಾರ್
Follow us
ನಯನಾ ರಾಜೀವ್
|

Updated on: Jun 07, 2024 | 8:11 AM

2024ರ ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ತೋರಿದ ಕಳಪೆ ಪ್ರದರ್ಶನದ ಹೊಣೆಯನ್ನು ಅಜಿತ್ ಪವಾರ್(Ajit Pawar) ಹೊತ್ತುಕೊಂಡಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುರುವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಸಿದರು.

ಸಭೆಯ ನಂತರ ಮಾತನಾಡಿದ ಅವರು, ಏಕನಾಥ್ ಶಿಂಧೆ ಅವರ ಶಿವಸೇನೆಗೆ ಉತ್ತಮ ಸ್ಥಾನಗಳು ಬಂದಿವೆ. ಅವರು ಶೇ.50 ಸ್ಥಾನಗಳನ್ನು ಪಡೆದಿದ್ದಾರೆ. ಎನ್‌ಡಿಎ ಕಳಪೆ ಪ್ರದರ್ಶನದ ಬಗ್ಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಪಕ್ಷಗಳು ಒಡೆಯುತ್ತಿರುವುದು ಇದೇ ಮೊದಲಲ್ಲ. 1978ರಲ್ಲಿಯೂ ಪಕ್ಷಗಳು ಇದೇ ರೀತಿಯಲ್ಲಿ ವಿಭಜನೆಯಾಗಿದ್ದವು.

ಪಕ್ಷದ ಅಧ್ಯಕ್ಷ ಅಜಿತ್ ಪವಾರ್ ಅವರಲ್ಲದೆ, ಪ್ರಫುಲ್ ಪಟೇಲ್ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಸಚಿವರು ಭಾಗವಹಿಸಿದ್ದರು. ಹಸನ್ ಮುಶ್ರೀಫ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್ ಮತ್ತು ಧನಂಜಯ್ ಮುಂಡೆ ಸೇರಿದ್ದಾರೆ.

ಮತ್ತಷ್ಟು ಓದಿ: ರಾಜಕೀಯದಲ್ಲಿ ಶಾಶ್ವತ ಶತ್ರು ಅಥವಾ ಮಿತ್ರರಿರುವುದಿಲ್ಲ: ಅಜಿತ್ ಪವಾರ್

2023 ರಲ್ಲಿ, ಅಜಿತ್ ಪವಾರ್, ಇತರ ಕೆಲವು ಶಾಸಕರೊಂದಿಗೆ, ಎನ್‌ಸಿಪಿಯಿಂದ ಬೇರ್ಪಟ್ಟು ಆಡಳಿತಾರೂಢ ಬಿಜೆಪಿಗೆ ಸೇರಿದರು. ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಯ ಮಿತ್ರಪಕ್ಷವಾಗಿ ಚುನಾವಣಾ ಕ್ಷೇತ್ರಕ್ಕೆ ಪ್ರವೇಶಿಸಿದ ಪವಾರ್ ಅವರ ರಾಷ್ಟ್ರೀಯವಾದೊ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಲೋಕಸಭೆ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಆದರೆ ಪಕ್ಷ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಯಿತು. ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಸುಪ್ರಿಯಾ ಸುಳೆ ಅವರು 1.5 ಲಕ್ಷ ಮತಗಳಿಂದ ಸೋಲಿಸಿದ್ದರು. ಸುಪ್ರಿಯಾ ಸುಳೆ ಶರದ್ ಪವಾರ್ ಅವರ ಮಗಳು.

48 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ ಗರಿಷ್ಠ 13 ಸ್ಥಾನಗಳನ್ನು ಪಡೆದುಕೊಂಡಿದೆ. ಇದರ ನಂತರ ಬಿಜೆಪಿ ಮತ್ತು ಶಿವಸೇನೆ ತಲಾ 9 ಸ್ಥಾನಗಳನ್ನು ಪಡೆದವು. ಇದಲ್ಲದೆ ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಎಸ್‌ಎಚ್‌ಎಸ್) ಕ್ರಮವಾಗಿ 8 ಮತ್ತು 7 ಸ್ಥಾನಗಳನ್ನು ಪಡೆದಿವೆ. ಆದರೆ ಎನ್‌ಸಿಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿಯ ಖಾತೆಗೆ ಹೋಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ