ಅಮೇಥಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್​ ವಾದ್ರಾ ಪೋಸ್ಟರ್

ಅಮೇಥಿಯಲ್ಲಿ ಮೇ 20ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಬಿಜೆಪಿ ಸ್ಮೃತಿ ಇರಾನಿಯನ್ನು ಮತ್ತೊಮ್ಮೆ ಕಣಕ್ಕಿಳಿಸಿದ್ದರೆ ಕಾಂಗ್ರೆಸ್​ ಇದುವರೆಗೂ ಅಭ್ಯರ್ಥಿಯ ಘೋಷಣೆ ಮಾಡಿಲ್ಲ.

ಅಮೇಥಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್​ ವಾದ್ರಾ ಪೋಸ್ಟರ್
ರಾಬರ್ಟ್​ ವಾದ್ರಾ ಪೋಸ್ಟರ್
Follow us
ನಯನಾ ರಾಜೀವ್
|

Updated on: Apr 24, 2024 | 2:44 PM

ಲೋಕಸಭಾ ಚುನಾವಣೆ(Lok Sabha Election: ಯ ಮೊದಲ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನಕ್ಕೆ ರಾಜ್ಯಗಳು ಸಿದ್ಧವಾಗುತ್ತಿವೆ. ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದ್ದು ಕಾಂಗ್ರೆಸ್​ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಕುತೂಹಲ ಮುಂದುವರೆಸಿದೆ. ಆದರೆ ಈಗಾಗಲೇ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್​ ವಾದ್ರಾ ಅವರ ಪೋಸ್ಟರ್​ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿ ಈ ಬಾರಿ ರಾಬರ್ಟ್​ ವಾದ್ರಾ ಎನ್ನುವ ಅರ್ಥವನ್ನು ಕೊಡುವ ವಾಖ್ಯವನ್ನು ಬರೆಯಲಾಗಿದೆ.

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ ಮತದಾನ ನಡೆಯಲಿದ್ದು, ಮೇ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದರೂ, ಕಾಂಗ್ರೆಸ್ ತನ್ನ ಆಯ್ಕೆಯನ್ನು ಇನ್ನೂ ಹೆಸರಿಸಿಲ್ಲ.

ಅಮೇಥಿಯಿಂದ ರಾಬರ್ಟ್​ ವಾದ್ರಾ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಗಳು ಎದ್ದಿದ್ದವು. ಇದಕ್ಕೂ ಮುನ್ನ ರಾಬರ್ಟ್​ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇರುವ ಬಗ್ಗೆ ಸುಳಿವು ನೀಡಿದ್ದರು.

ಮತ್ತಷ್ಟು ಓದಿ: ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಅಮೇಥಿಯು ಗಾಂಧಿಯವರ ಕುಟುಂಬದ ಸ್ಥಾನವಾಗಿದ್ದು, ಹಿಂದೆ ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರು. 2019 ರ ಚುನಾವಣೆಯಲ್ಲಿ, ಕೇರಳದ ವಯನಾಡಿನಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ರಾಹುಲ್ ಗಾಂಧಿ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ನಿನ್ನೆಯಷ್ಟೇ ರಾಜಕೀಯ ಎಂಬುದು ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ