Padmakar Valvi: ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರ ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಪದ್ಮಾಕರ್ ವಾಲ್ವಿ ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Padmakar Valvi: ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ
ಪದ್ಮಾಕರ್

Updated on: Mar 13, 2024 | 12:09 PM

ಮಹಾರಾಷ್ಟ್ರ ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಪದ್ಮಾಕರ್ ವಾಲ್ವಿ(Padmakar Valvi)  ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ನಂದೂರ್‌ಬಾರ್‌ನ ಶಾಹದಾ ಕ್ಷೇತ್ರದ ಮಾಜಿ ಶಾಸಕ ವಾಲ್ವಿ ಅವರು ಮುಂಬೈನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ್ ಚವ್ಹಾಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಮಿಲಿಂದ್ ದಿಯೋರಾ ಮತ್ತು ಅಶೋಕ್ ಚವಾಣ್ ನಂತರ ಕಾಂಗ್ರೆಸ್​ನಿಂದ ನಿರ್ಗಮಿಸಿದ ಮೂರನೇ ನಾಯಕರು ಇವರಾಗಿದ್ದಾರೆ. ದೇವೋರಾ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡರೆ, ಅಶೋಕ್ ಚವಾಣ್ ಬಿಜೆಪಿಗೆ ಸೇರಿ ರಾಜ್ಯಸಭೆಗೆ ಹೋಗಿದ್ದಾರೆ. ರಾಜ್ಯದಲ್ಲಿ ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಹಿಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ನಿನ್ನೆಯೇ ನಂದೂರ್ಬಾರ್ ಜಿಲ್ಲೆಗೆ ತಲುಪಿತ್ತು. ಪದ್ಮಾಕರ್ ವಾಲ್ವಿ ಬಿಜೆಪಿ ಸೇರುವ ಮೂಲಕ ನಂದೂರಬಾರ್‌ನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಪದ್ಮಾಕರ್ ವಾಲ್ವಿ ಅವರು ನಂದೂರ್ಬಾರ್ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನ ಪ್ರಮುಖ ಮುಖಗಳಲ್ಲಿ ಒಬ್ಬರು ಎಂದು ಕರೆಯುತ್ತಾರೆ . 2009 ರಲ್ಲಿ, ಅವರು ಶಾಹದಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಆದರೆ 2014ರಲ್ಲಿ ಸೋಲು ಕಂಡಿದ್ದರು.

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:58 am, Wed, 13 March 24

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us