Uttar Pradesh: ಒಂದೇ ದಿನ 8 ಬಾರಿ ಮತದಾನ ಮಾಡಿ ಸಿಕ್ಕಿಬಿದ್ದ ಯುವಕ, ಇಟಾಹ್​ನಲ್ಲಿ ಮರು ಮತದಾನ

ಉತ್ತರ ಪ್ರದೇಶದಲ್ಲಿ ನಡೆದ ಮೂರನೇ ಹಂತದ ಮತದಾನದ ಸಂದರ್ಭದಲ್ಲಿ ಯುವಕನೊಬ್ಬ ಒಂದೇ ಬೂತ್​ನಲ್ಲಿ 8 ಬಾರಿ ಮತ ಚಲಾಯಿಸಿ ಸಿಕ್ಕಿಬಿದ್ದಿದ್ದಾನೆ. ಅಷ್ಟೇ ಅಲ್ಲ ಪ್ರತಿ ಬಾರಿಯೂ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

Uttar Pradesh: ಒಂದೇ ದಿನ 8 ಬಾರಿ ಮತದಾನ ಮಾಡಿ ಸಿಕ್ಕಿಬಿದ್ದ ಯುವಕ, ಇಟಾಹ್​ನಲ್ಲಿ ಮರು ಮತದಾನ
Follow us
ನಯನಾ ರಾಜೀವ್
|

Updated on: May 20, 2024 | 9:07 AM

ಉತ್ತರಪ್ರದೇಶದ ಇಟಾಹ್‌(Etah)ನಲ್ಲಿ ಮೂರನೇ ಹಂತದ ಮತದಾನದಲ್ಲಿ ಯುವಕನೊಬ್ಬ ಒಂದೇ ಬೂತ್‌ನಲ್ಲಿ 8 ಬಾರಿ ಮತ ಚಲಾಯಿಸಿ ಸಿಕ್ಕಿಬಿದ್ದಿದ್ದಾನೆ. ಅಷ್ಟೇ ಅಲ್ಲ ಪ್ರತಿ ಬಾರಿಯೂ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅದರ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶ  ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಚುನಾವಣಾ ತಂಡದ ಎಲ್ಲ ಸದಸ್ಯರನ್ನು ಅಮಾನತುಗೊಳಿಸಲಾಗಿದ್ದು, ಮರು ಮತದಾನಕ್ಕೆ ಶಿಫಾರಸು ಮಾಡಲಾಗಿದೆ.

ಮತ್ತಷ್ಟು ಓದಿ: Lok Sabha Election 2024: 8 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 49 ಸ್ಥಾನಗಳಿಗೆ ಐದನೇ ಹಂತದ ಮತದಾನ ಶುರು

ಮೇ 7 ರಂದು ಮೂರನೇ ಹಂತದ ಅಡಿಯಲ್ಲಿ ಇಟಾಹ್‌ನಲ್ಲಿ ಮತದಾನ ನಡೆಯಿತು. 2 ನಿಮಿಷ 20 ಸೆಕೆಂಡ್‌ನ ಈ ವಿಡಿಯೋದಲ್ಲಿ ಈ ಯುವಕ ಪ್ರತಿ ಬಾರಿಯೂ ಮತದಾನ ಮಾಡಿದ್ದಾನೆ. ಅವರು ಕಮಲದ ಚಿಹ್ನೆಯ ಮುಂಭಾಗದಲ್ಲಿರುವ ಗುಂಡಿಯನ್ನು ಒತ್ತುವುದನ್ನು ಕಾಣಬಹುದು.

ವಿಡಿಯೋ

ಚುನಾವಣಾ ಆಯೋಗ ಬಿಜೆಪಿಯ ಹಿತಾಸಕ್ತಿಯಂತೆ ಕೆಲಸ ಮಾಡುತ್ತಿದೆ, ಇದೆಲ್ಲದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಖಿಲೇಶ್​ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ