AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಬಿಜೆಪಿಯೊಂದಿಗಿಲ್ಲ ಮೈತ್ರಿ, 10 ಲೋಕಸಭಾ ಕ್ಷೇತ್ರಗಳಲ್ಲಿ ಜೆಜೆಪಿ ಸ್ವತಂತ್ರ ಸ್ಪರ್ಧೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಹರ್ಯಾಣದ ಎಲ್ಲಾ 10 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಪ್ರಕಟಿಸಿದೆ. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ಕೆಲವು ದಿನಗಳ ನಂತರ ಪಕ್ಷದಿಂದ ಈ ಘೋಷಣೆ ಮಾಡಲಾಗಿದೆ.

Haryana: ಬಿಜೆಪಿಯೊಂದಿಗಿಲ್ಲ ಮೈತ್ರಿ, 10 ಲೋಕಸಭಾ ಕ್ಷೇತ್ರಗಳಲ್ಲಿ ಜೆಜೆಪಿ ಸ್ವತಂತ್ರ ಸ್ಪರ್ಧೆ
ಅಜಯ್​ ಸಿಂಗ್
ನಯನಾ ರಾಜೀವ್
|

Updated on: Mar 28, 2024 | 8:11 AM

Share

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ  ಹರ್ಯಾಣದ ಎಲ್ಲಾ 10 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಪ್ರಕಟಿಸಿದೆ. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ಕೆಲವು ದಿನಗಳ ನಂತರ ಪಕ್ಷದಿಂದ ಈ ಘೋಷಣೆ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಅಜಯ್ ಸಿಂಗ್ ಚೌಟಾಲಾ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹರ್ಯಾಣದ ಎಲ್ಲಾ 10 ಲೋಕಸಭಾ ಸ್ಥಾನಗಳಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಆಡಳಿತಾರೂಢ ಬಿಜೆಪಿ ಎಲ್ಲಾ 10 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮೇ 25 ರಂದು ರಾಜ್ಯದಲ್ಲಿ ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೆಜೆಪಿಯ ಈ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಿಶಾನ್ ಸಿಂಗ್ ಕೂಡ ಉಪಸ್ಥಿತರಿದ್ದರು. ಕೆಲವು

ದಿನಗಳ ಹಿಂದೆ ಹರಿಯಾಣದಲ್ಲಿ ಸಿಎಂ ಮುಖವನ್ನೇ ಬದಲಿಸಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನೈಬ್ ಸಿಂಗ್ ಸೈನಿ ಅವರಿಗೆ ಕಮಾಂಡ್ ನೀಡಲಾಗಿದ್ದು, ಇದರೊಂದಿಗೆ ಬಿಜೆಪಿ-ಜೆಜೆಪಿ ಮೈತ್ರಿಯೂ ಅಂತ್ಯಗೊಂಡಿದೆ. ಇದರ ನಂತರ, ಜೆಜೆಪಿ ಮುಖ್ಯಸ್ಥ ಅಜಯ್ ಸಿಂಗ್ ಚೌಟಾಲಾ ಅವರು ತಮ್ಮ ಪಕ್ಷವು ಬಿಜೆಪಿಯಿಂದ ಎರಡು ಸ್ಥಾನಗಳನ್ನು ಕೇಳಿದೆ ಆದರೆ ಬಿಜೆಪಿ ನಿರಾಕರಿಸಿದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Varun Gandhi: ಊಹಾಪೋಹಗಳಿಗೆ ತೆರೆ, ಪಿಲಿಭಿತ್​​ನಿಂದ ಸ್ಪರ್ಧಿಸುತ್ತಿಲ್ಲ ವರುಣ್ ಗಾಂಧಿ

ಹರ್ಯಾಣದಲ್ಲಿ 2019 ರ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದು, ಅದರಲ್ಲಿ ದುಶ್ಯಂತ್ ಚೌಟಾಲಾ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಹರಿಯಾಣದ ಎಲ್ಲಾ 10 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ಮೇ 25 ರಂದು ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?