Lok Sabha Election: ಮಧ್ಯಪ್ರದೇಶದಲ್ಲಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

BJP Star Campaigners List:ಮಧ್ಯಪ್ರದೇಶ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವಪ್ರಕಾಶ್, ಡಾ.ಮೋಹನ್ ಯಾದವ್, ವಿಡಿ ಶರ್ಮಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರುಗಳು ಸೇರಿವೆ.

Lok Sabha Election: ಮಧ್ಯಪ್ರದೇಶದಲ್ಲಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿImage Credit source: Business Standard
Follow us
ನಯನಾ ರಾಜೀವ್
|

Updated on:Mar 27, 2024 | 9:10 AM

ಮಧ್ಯಪ್ರದೇಶ ಲೋಕಸಭಾ ಚುನಾವಣೆ(Lok Sabha Election)ಯ ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವಪ್ರಕಾಶ್, ಡಾ.ಮೋಹನ್ ಯಾದವ್, ವಿಡಿ ಶರ್ಮಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರುಗಳು ಸೇರಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ಸಹ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ ಸುರೇಶ್ ಪಚೌರಿ ಅವರನ್ನೂ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಮಾಜಿ ಸಿಎಂ ಸಂಸದೆ ಹಾಗೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕಿ ಉಮಾಭಾರತಿ ಹೆಸರಿಲ್ಲ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಹಲವು ನಾಯಕರೂ ಸ್ಥಾನ ಪಡೆದಿದ್ದಾರೆ. ಸಿಎಂ ಮೋಹನ್ ಯಾದವ್, ವಿಡಿ ಶರ್ಮಾ, ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಉಪಮುಖ್ಯಮಂತ್ರಿ ಜಗದೀಶ್ ದೇವ್ರಾ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭೂಪೇಂದ್ರ ಪಟೇಲ್ ಅವರ ಹೆಸರುಗಳು ಸೇರಿವೆ.

ಮತ್ತಷ್ಟು ಓದಿ: ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾದ ತೇಜಸ್ವಿ ಯಾದವ್, ಸೀಟು ಹಂಚಿಕೆ ಬಹುತೇಕ ಅಂತಿಮ

ಆದರೆ, ಜ್ಯೋತಿರಾದಿತ್ಯ ಸಿಂಧಿಯಾ, ವೀರೇಂದ್ರ ಕುಮಾರ್ ಖಟಿಕ್, ಫಗ್ಗನ್ ಸಿಂಗ್ ಕುಲಸ್ತೆ, ಹಿತಾನಂದ್, ಪ್ರಹ್ಲಾದ್ ಪಟೇಲ್, ಕೈಲಾಶ್ ವಿಜಯವರ್ಗಿಯಾ, ಜೈಭನ್ ಸಿಂಗ್ ಪವಯ್ಯ, ರಾಕೇಶ್ ಸಿಂಗ್, ಲಾಲ್ ಸಿಂಗ್ ಆರ್ಯ, ನಾರಾಯಣ್ ಕುಶ್ವಾಹ, ತುಳಸಿ ಸಿಲಾವತ್, ನಿರ್ಮಲಾ ಭೂರಿಯಾ, ಎಡಲ್ ಸಿಂಗ್ ಕಂಸನಾ, ಗೋಪಾಲ್ ಭರ್ರೋತ್ ಮಿಲಗವಾ, ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಕವಿತಾ ಪಾಟಿದಾರ್, ಗೌರಿಶಂಕರ್ ಬಿಸೇನ್ ಮತ್ತು ಸುರೇಶ್ ಪಚೌರಿ ಅವರಿಗೂ ಸ್ಥಾನ ನೀಡಲಾಗಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೆಸರುಗಳು ಸೇರಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:09 am, Wed, 27 March 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ