Lok Sabha Elections 2024: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಜತೆ ಮೈತ್ರಿ ಮಾಡಿಕೊಂಡ ನಟ ಕಮಲ್ ಹಾಸನ್

|

Updated on: Mar 09, 2024 | 2:57 PM

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಟ ಕಮಲ್ ಹಾಸನ್ ಸಿಎಂ ಎಂಕೆ ಸ್ಟಾಲಿನ್ ಅವರಿಗೆ ಬೆಂಬಲ ನೀಡಲಿದ್ದು, ಈ ಮೂಲಕ ಎಂಎನ್‌ಎಂ ಡಿಎಂಕೆ ಜತೆಗೆ ಮೈತ್ರಿ ಮಾಡಿಕೊಳ್ಳಿಲಿದೆ. ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಿದ್ದೇನೆ ಎಂದು ಹೇಳಿದ್ದಾರೆ.

Lok Sabha Elections 2024: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಜತೆ ಮೈತ್ರಿ ಮಾಡಿಕೊಂಡ ನಟ ಕಮಲ್ ಹಾಸನ್
Follow us on

ಖ್ಯಾತ ನಟ ಕಮಲ್ ಹಾಸನ್ (Kamal Haasan) ಅವರು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿದ್ದಾರೆ. ಕಮಲ್ ಹಾಸನ್ ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಮತ್ತು ಲೋಕಸಭೆ ಚುನಾವಣೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಇಂದು (ಮಾ.9) ಘೋಷಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಿದ್ದೇನೆ ಎಂದು ಹೇಳಿದ್ದಾರೆ.

ನನಗೆ ಯಾವುದೇ ಹುದ್ದೆ ಬೇಡ, 2025ರ ರಾಜ್ಯಸಭಾ ಚುನಾವಣೆಗೆ ಎಂಎನ್‌ಎಂಗೆ ಡಿಎಂಕೆ ಒಂದು ಸ್ಥಾನವನ್ನು ನೀಡಿದೆ ಎಂದು ಹೇಳಿದ್ದಾರೆ. ಡಿಎಂಕೆ ಪ್ರಧಾನ ಕಛೇರಿ ಅಣ್ಣಾ ಅರಿವಲಯಂನಲ್ಲಿ ಕಮಲ್ ಹಾಸನ್ ಡಿಎಂಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿಗೆ ಸಂಪೂರ್ಣ ಬೆಂಬಲ: ಕಮಲ್ ಹಾಸನ್

MNM ಮೈತ್ರಿಗೆ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ. ಹಾಗೂ ಇಬ್ಬರು ನಾಯಕರ ನಡುವಿನ ಒಪ್ಪಂದದ ಪ್ರಕಾರ ತಮಿಳುನಾಡಿನ 39 ಲೋಕಸಭಾ ಸ್ಥಾನಗಳು ಮತ್ತು ಪುದುಚೇರಿ ಭಾಗದಲ್ಲಿ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

‘ಸನಾತನ ಧರ್ಮ’ ವಿವಾದದಲ್ಲಿ ಉದಯನಿಧಿಯನ್ನು ಗುರಿಯಾಗಿಸಲಾಗಿದೆ

ಸನಾತನ ಧರ್ಮ’ ವಿವಾದದ ಕುರಿತು ಉದಯನಿಧಿ ಸ್ಟಾಲಿನ್ ಅವರನ್ನು ಸಮರ್ಥಿಸಿಕೊಂಡ ಕಮಲ್ ಹಾಸನ್, ಸನಾತನದ ಬಗ್ಗೆ ಮಾತನಾಡಿದ ಕಾರಣಕ್ಕಾಗಿ ಚಿಕ್ಕ ಮಗುವನ್ನು (ಉದಯನಿಧಿ) ಗುರಿಯಾಗಿಸಲಾಗಿದೆ ಎಂದು ಹೇಳಿದ್ದಾರೆ. ಡಿಸೆಂಬರ್ 2022ರಲ್ಲಿ ತಮಿಳುನಾಡಿನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರೊಂದಿಗೆ ಹಾಸನ್ ಕಾಣಿಸಿಕೊಂಡಿದ್ದರು. 2019 ರ ಲೋಕಸಭೆ ಚುನಾವಣೆ ಮತ್ತು 2021ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರು. ಈ ಸಮಯದಲ್ಲಿ ಎಂಎನ್‌ಎಂ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟದ ಅಭ್ಯರ್ಥಿಗೆ ಬೆಂಬಲ ನೀಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ