AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕಾಂಗ್ರೆಸ್​ ನಗೆಪಾಟಲಿಗೀಡಾಗಿದೆ, ಹಿಮಾಚಲಪ್ರದೇಶ ರಾಜಕೀಯದ ಬಗ್ಗೆ ಅನುರಾಗ್ ಠಾಕೂರ್ ಮಾತು

ಕಾಂಗ್ರೆಸ್​ ಪಕ್ಷವು ಹಿಮಾಚಲ ಪ್ರದೇಶದಲ್ಲಿ ನಗೆಪಾಟಲಿಗೀಡಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಹಿಮಾಚಲಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನು ಅನುರಾಗ್ ಟೀಕಿಸಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್​ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸುಖು ವಿಫಲರಾಗಿದ್ದಾರೆ ಹಿಮಾಚಲ ಪ್ರದೇಶದಲ್ಲಿ ಇತ್ತೀಚಿನ ಪ್ರವಾಹ ಪರಿಸ್ಥಿತಿಯನ್ನು ರಾಜಕೀಯಗೊಳಿಸಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್​ ನಗೆಪಾಟಲಿಗೀಡಾಗಿದೆ, ಹಿಮಾಚಲಪ್ರದೇಶ ರಾಜಕೀಯದ ಬಗ್ಗೆ ಅನುರಾಗ್ ಠಾಕೂರ್ ಮಾತು
ಅನುರಾಗ್ ಠಾಕೂರ್
ನಯನಾ ರಾಜೀವ್
|

Updated on: May 30, 2024 | 1:59 PM

Share

ಕಾಂಗ್ರೆಸ್​ ಸರ್ಕಾರ ಹಿಮಾಚಲ ಪ್ರದೇಶ(Himacha Pradesh)ದ ಜನತೆಗೆ ಏನನ್ನೂ ಮಾಡಿಲ್ಲ, ಬದಲಾಗಿ ಎಲ್ಲವನ್ನೂ ಲೂಟಿ ಮಾಡಿದೆ ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್​ ನಗೆಪಾಟಲಿಗೀಡಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur)) ಹೇಳಿದ್ದಾರೆ. ಹಿಮಾಚಲಪ್ರದೇಶದ ಪ್ರಸ್ತುತ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನು ಅನುರಾಗ್ ಟೀಕಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸುಖು ವಿಫಲರಾಗಿದ್ದಾರೆ ಹಿಮಾಚಲ ಪ್ರದೇಶದಲ್ಲಿ ಇತ್ತೀಚಿನ ಪ್ರವಾಹ ಪರಿಸ್ಥಿತಿಯನ್ನು ಕೂಡ ರಾಜಕೀಯಗೊಳಿಸಿದ್ದಾರೆ ಎಂದು ಆರೋಪಿಸಿದರು.

ಮೋದಿ ಸರ್ಕಾರವು ಶೌಚಾಲಯಗಳು, ಉಚಿತ ಧಾನ್ಯಗಳು, ಗ್ಯಾಸ್​ ಸಿಲಿಂಡರ್​ಗಳನ್ನು ಒದಗಿಸಿದ್ದರಿಂದ ಮಹಿಳೆಯರಿಗೆ ಪ್ರಧಾನಿ ಮೇಲೆ ಸಂಪೂರ್ಣ ನಂಬಿಕೆ ಇದೆ. ಮಹಿಳೆಯರಿಗೆ ಸಂತೋಷ ಹಾಗೂ ಶಕ್ತಿಯನ್ನು ಒದಗಿಸುವ ಸೌಲಭ್ಯಗಳನ್ನು ಪ್ರಧಾನಿ ಒದಗಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 1 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ, ಕಂಗ್ರಾ, ಶಿಮ್ಲಾ, ಮಂಡಿ ಮತ್ತು ಹಮೀರ್‌ಪುರದ ಎಲ್ಲಾ ನಾಲ್ಕು ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ.

ಮತ್ತಷ್ಟು ಓದಿ: Lok Sabha Election: ಪ್ರಧಾನಿ ಮೋದಿ ಸೇರಿ ಏಳನೇ ಹಂತದ ಚುನಾವಣಾ ಕಣದಲ್ಲಿರುವ ದಿಗ್ಗಜರು ಯಾರ್ಯಾರು?

ಕೇಂದ್ರ ಸಚಿವ ಮತ್ತು ಹಮೀರ್‌ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್‌ನ ಸತ್ಪಾಲ್ ರೈಜಾದಾ ಅವರನ್ನು ಎದುರಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ನಾಯಕರ ಮಾತು ಪಾಕಿಸ್ತಾನಕ್ಕೂ ತಲುಪಿದೆ.

ಅನುರಾಗ್ ಠಾಕೂರ್ ಅವರು ವಿರೋಧ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡರು ಮತ್ತು ಕೆಲವರು ಭಾರತದಲ್ಲಿ ವಾಸಿಸುತ್ತಿದ್ದಾರೆ ಆದರೆ ಅವರ ಹೃದಯವು ಪಾಕಿಸ್ತಾನಕ್ಕಾಗಿ ಮಿಡಿಯುತ್ತದೆ ಎಂದು ಹೇಳಿದರು. ಪಾಕಿಸ್ತಾನದ ಕೆಲವರು ಭಾರತದ ವಿರೋಧ ಪಕ್ಷದ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ, ಕೇಜ್ರಿವಾಲ್ ಗೆದ್ದರೆ ಪಾಕಿಸ್ತಾನಕ್ಕೆ ಖುಷಿ ವಿರೋಧ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಅನುರಾಗ್ ಠಾಕೂರ್, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿಯಂತಹವರು ಗೆದ್ದರೆ ಪಾಕಿಸ್ತಾನಕ್ಕೆ ಸಂತೋಷವಾಗುತ್ತದೆ ಆದರೆ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದೊಂದಿಗೆ ಭಾರತ ಉತ್ತಮ ಬಾಂಧವ್ಯ ಬಯಸಿದೆ ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ, ಅನುರಾಗ್ ಠಾಕೂರ್, ಭಾರತವು ಯಾವಾಗಲೂ ನೆರೆಯ ರಾಷ್ಟ್ರವಾಗಿ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ ಆದರೆ ಪ್ರತಿ ಬಾರಿಯೂ ದ್ರೋಹವಿದೆ ಎಂದು ಹೇಳಿದರು. ಕಾಂಗ್ರೆಸ್‌ನನ್ನೇ ಗುರಿಯಾಗಿಟ್ಟುಕೊಂಡು, ಕಾಂಗ್ರೆಸ್‌ನವರು ಗಡಿಯನ್ನು ತೆರೆಯಲು ಬಯಸುತ್ತಾರೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ