AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ, ಭೋಜ್​ಪುರಿ ನಟ ಪವನ್​ ಸಿಂಗ್​ ಬಿಜೆಪಿಯಿಂದ ಉಚ್ಛಾಟನೆ

ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಎನ್​ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ, ಭೋಜ್​ಪುರಿ ನಟ ಪವನ್​ ಸಿಂಗ್​ ಬಿಜೆಪಿಯಿಂದ ಉಚ್ಛಾಟನೆ
ಪವನ್​ ಸಿಂಗ್
ನಯನಾ ರಾಜೀವ್
|

Updated on:May 22, 2024 | 11:39 AM

Share

ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್(Pawan Singh)​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪವನ್​ಸಿಂಗ್ ಈ ಹಿಂದೆಯೇ ಪ್ರಕಟಿಸಿದ್ದರು. ಬಿಹಾರದ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಎನ್​ಡಿಎ ಅಧಿಕೃತ ಅಭ್ಯರ್ಥಿ ಉಪೇಂದ್ರ ಕುಶ್ವಾಹ ವಿರುದ್ಧ ಪವನ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪವನ್​ಸಿಂಗ್ ತಾಯಿ ಪ್ರತಿಮಾ ದೇವಿ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಬಿಜೆಪಿಯ ಒತ್ತಡದ ನಡುವೆಯೂ ಅವರ ಪುತ್ರ ಕ್ಷೇತ್ರದಲ್ಲಿ ನಿಂತಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಬಿಜೆಪಿ ಮೊದಲು ಪವನ್​ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಕಣಕ್ಕಿಳಿಸಿತ್ತು. ಆ ವೇಳೆ ಪವನ್​ ಸಿಂಗ್ ತುಂಬಾ ಸಂಭ್ರಮಿಸಿದ್ದರು. ಆದರೆ ಅವರ ಹಾಡುಗಳಿಗೆ ಸಂಬಂಧಿಸಿದಂತೆ ಬಂಗಾಳದಲ್ಲಿ ಪ್ರತಿಭಟನೆಗಳು ನಡೆದ ಬಳಿಕ ಹಿಂದೆ ಸರಿದರು. ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಬಿಜೆಪಿ ಟಿಕೆಟ್ ತಿರಸ್ಕರಿಸಿ ಕಾರಕಟ್​ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿಂಗ್ ನಿರ್ಧರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:24 am, Wed, 22 May 24

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?