ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್ಪುರಿ ಗಾಯಕ ಹಾಗೂ ನಟ ಪವನ್ಸಿಂಗ್(Pawan Singh) ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಕಾರಕಟ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪವನ್ಸಿಂಗ್ ಈ ಹಿಂದೆಯೇ ಪ್ರಕಟಿಸಿದ್ದರು. ಬಿಹಾರದ ಕಾರಕಟ್ ಲೋಕಸಭಾ ಕ್ಷೇತ್ರದಿಂದ ಎನ್ಡಿಎ ಅಧಿಕೃತ ಅಭ್ಯರ್ಥಿ ಉಪೇಂದ್ರ ಕುಶ್ವಾಹ ವಿರುದ್ಧ ಪವನ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಪವನ್ಸಿಂಗ್ ತಾಯಿ ಪ್ರತಿಮಾ ದೇವಿ ಕಾರಕಟ್ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಬಿಜೆಪಿಯ ಒತ್ತಡದ ನಡುವೆಯೂ ಅವರ ಪುತ್ರ ಕ್ಷೇತ್ರದಲ್ಲಿ ನಿಂತಿದ್ದಾರೆ.
ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್ ಸಿಂಗ್
ಬಿಜೆಪಿ ಮೊದಲು ಪವನ್ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್ನಿಂದ ಕಣಕ್ಕಿಳಿಸಿತ್ತು. ಆ ವೇಳೆ ಪವನ್ ಸಿಂಗ್ ತುಂಬಾ ಸಂಭ್ರಮಿಸಿದ್ದರು. ಆದರೆ ಅವರ ಹಾಡುಗಳಿಗೆ ಸಂಬಂಧಿಸಿದಂತೆ ಬಂಗಾಳದಲ್ಲಿ ಪ್ರತಿಭಟನೆಗಳು ನಡೆದ ಬಳಿಕ ಹಿಂದೆ ಸರಿದರು. ಪಶ್ಚಿಮ ಬಂಗಾಳದ ಅಸನ್ಸೋಲ್ನಿಂದ ಬಿಜೆಪಿ ಟಿಕೆಟ್ ತಿರಸ್ಕರಿಸಿ ಕಾರಕಟ್ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿಂಗ್ ನಿರ್ಧರಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:24 am, Wed, 22 May 24