ಚುನಾವಣಾ ಪ್ರಚಾರಕ್ಕೂ ಬಂದಿಲ್ಲ, ಮತದಾನವನ್ನೂ ಮಾಡಿಲ್ಲ ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ನೋಟಿಸ್
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ಸಂಸದ ಜಯಂತ್ ಸಿನ್ಹಾ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಹೇಳಿ ನೋಟಿಸ್ ಜಾರಿ ಮಾಡಿದೆ.
ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಜಯಂತ್ ಸಿನ್ಹಾ(Jayant Sinha) ಅವರಿಗೆ ಭಾರತೀಯ ಜನತಾ ಪಕ್ಷ ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ ನಂತರ ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿಲ್ಲ.
ಸೋಮವಾರ ನಡೆದ ಚುನಾವಣೆಯಲ್ಲಿ ಮತದಾನಕ್ಕೂ ಬರಲಿಲ್ಲ ಎಂದು ಹೇಳಿರುವ ಬಿಜೆಪಿ ಎರಡು ದಿನಗಳಲ್ಲಿ ಪಕ್ಷವು ಸಿನ್ಹಾ ಅವರಿಂದ ಸ್ಪಷ್ಟನೆ ಕೇಳಿದೆ. ಮಾಜಿ ಕೇಂದ್ರ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರ ಪುತ್ರ ಜಯಂತ್ ಅವರು ಜಾರ್ಖಂಡ್‌ನ ಹಜಾರಿಬಾಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ಜಯಂತ್ ಸಿನ್ಹಾ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದಲೂ ನೀವು ಸಂಘಟನಾ ಕಾರ್ಯ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಅವರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರ ಸೂಚನೆಗಳನ್ನು ಅನುಸರಿಸಿ, ಪಕ್ಷವು ಜಯಂತ್ ಅವರಿಂದ ಸ್ಪಷ್ಟನೆ ಕೇಳಿದೆ. ಜೈಸ್ವಾಲ್ ಅವರನ್ನು ಹಜಾರಿಬಾಗ್‌ನಿಂದ ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸುವ ಕೆಲವೇ ಗಂಟೆಗಳ ಮೊದಲು ಚುನಾವಣಾ ರಾಜಕೀಯದಿಂದ ಮುಕ್ತಗೊಳಿಸುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದರು.
ಮತ್ತಷ್ಟು ಓದಿ: 6 ರಾಜ್ಯಗಳಲ್ಲಿ ಚುನಾವಣಾ ಪ್ರಚಾರ: ಯುಪಿ-ಬಿಹಾರದಲ್ಲಿ ಮೋದಿ, ಒಡಿಶಾದಲ್ಲಿ ಅಮಿತ್ ಶಾ
ಮಾರ್ಚ್ 2 ರಂದು, ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಸಿನ್ಹಾ ಅವರು ಆರ್ಥಿಕ ಮತ್ತು ಆಡಳಿತದ ವಿಷಯಗಳಲ್ಲಿ ಪಕ್ಷದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದ್ದರು. ಕಳೆದ ಹತ್ತು ವರ್ಷಗಳಿಂದ ಭಾರತ ಮತ್ತು ಹಜಾರಿಬಾಗ್‌ನ ಜನರಿಗೆ ಸೇವೆ ಸಲ್ಲಿಸುವ ಭಾಗ್ಯವನ್ನು ನಾನು ಪಡೆದಿದ್ದೇನೆ. ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕತ್ವದಿಂದ ನನಗೆ ಅನೇಕ ಅವಕಾಶಗಳು ದೊರೆತಿವೆ. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದರು.
ಜಯಂತ್ ಸಿನ್ಹಾ ಅವರು 2019 ರಲ್ಲಿ ಕಾಂಗ್ರೆಸ್‌ನ ಗೋಪಾಲ್ ಸಾಹು ಅವರನ್ನು ಸೋಲಿಸಿದರು ಮತ್ತು 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಆದರೆ, ಜೈಸ್ವಾಲ್ ಈ ಹಿಂದೆ ಜೆವಿಎಂ ಟಿಕೆಟ್‌ನಲ್ಲಿ ಮಂಡು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ