AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ

ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್​ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ
ಬಸ್​
ನಯನಾ ರಾಜೀವ್
|

Updated on: May 08, 2024 | 7:59 AM

Share

ಚುನಾವಣೆ ಬಳಿಕ ಇವಿಎಂ(EVM) ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಜಿಲ್ಲೆಯ ಗೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೂತ್​ ಸಂಖ್ಯೆ 275, 276,277,278,279 ಹಾಗು 280ಕ್ಕೆ ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಬಸ್​ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಘಟನೆಯ ಸಮಯದಲ್ಲಿ ಬಸ್​ನಲ್ಲಿ ಆರು ಮತಗಟ್ಟೆಗಳ ಇವಿಎಣಗಳು ಇದ್ದವು, ಅವುಗಳಲ್ಲಿ ನಾಲ್ಕಕ್ಕೆ ಹಾನಿಯಾಗಿದೆ. ಎರಡು ಸುರಕ್ಷಿತವಾಗಿದೆ. ಪರಿಣಾಮ ನಾಲ್ಕು ಇವಿಎಂಗಳಲ್ಲಿ ಕಂಟ್ರೋಲ್ ಯೂನಿಟ್​ ಅಥವಾ ಬ್ಯಾಲೆಟ್ ಯೂನಿಟ್​ಗೆ ಹಾನಿಯಾಗಿದೆ.

ಮತ್ತಷ್ಟು ಓದಿ: Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!

ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ತಮ್ಮ ವರದಿಯನ್ನು ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಶೇ.72.65ರಷ್ಟು ಮತದಾನವಾಗಿತ್ತು ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸ್​ನ ಮುಂಭಾಗದಲ್ಲಿ ಚಿಲಕ ಹಾಕಿದ್ದ ಕಾರಣ ಹಿಂಬಾಗಿಲು ಮತ್ತು ಕಿಟಕಿ ಒಡೆದು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?