
ಚುನಾವಣೆ ಬಳಿಕ ಇವಿಎಂ(EVM) ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಜಿಲ್ಲೆಯ ಗೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೂತ್ ಸಂಖ್ಯೆ 275, 276,277,278,279 ಹಾಗು 280ಕ್ಕೆ ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಘಟನೆಯ ಸಮಯದಲ್ಲಿ ಬಸ್ನಲ್ಲಿ ಆರು ಮತಗಟ್ಟೆಗಳ ಇವಿಎಣಗಳು ಇದ್ದವು, ಅವುಗಳಲ್ಲಿ ನಾಲ್ಕಕ್ಕೆ ಹಾನಿಯಾಗಿದೆ. ಎರಡು ಸುರಕ್ಷಿತವಾಗಿದೆ. ಪರಿಣಾಮ ನಾಲ್ಕು ಇವಿಎಂಗಳಲ್ಲಿ ಕಂಟ್ರೋಲ್ ಯೂನಿಟ್ ಅಥವಾ ಬ್ಯಾಲೆಟ್ ಯೂನಿಟ್ಗೆ ಹಾನಿಯಾಗಿದೆ.
ಮತ್ತಷ್ಟು ಓದಿ: Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!
ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ತಮ್ಮ ವರದಿಯನ್ನು ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಶೇ.72.65ರಷ್ಟು ಮತದಾನವಾಗಿತ್ತು ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಸ್ನ ಮುಂಭಾಗದಲ್ಲಿ ಚಿಲಕ ಹಾಕಿದ್ದ ಕಾರಣ ಹಿಂಬಾಗಿಲು ಮತ್ತು ಕಿಟಕಿ ಒಡೆದು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ