ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ; ಕಾಂಗ್ರೆಸ್ನಿಂದ ಸತ್ಯಶೋಧನಾ ಸಮಿತಿ ರಚನೆ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ಇಂಡಿಯ ಬ್ಲಾಕ್ ತೀವ್ರ ಪೈಪೋಟಿ ನೀಡಿದ್ದರೂ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ (Congress) ಕಳಪೆ ಸಾಧನೆ ತೋರಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂವರು ಸದಸ್ಯರ ಸತ್ಯ ಶೋಧನಾ ಸಮಿತಿ ರಚಿಸಿದೆ. ಮಧ್ಯಪ್ರದೇಶ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ಒಡಿಶಾ, ದೆಹಲಿ, ಉತ್ತರಾಖಂಡ್, ಹಿಮಾಚಲ ಪ್ರದೇಶಗಳಲ್ಲಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚನೆ ಮಾಡಲಾಗಿದೆ.
ಲೋಕಸಭೆ ಚುನಾವಣೆಯಲ್ಲಿನ ಸಾಧನೆಯನ್ನು ವಿಶ್ಲೇಷಿಸಲು 8 ರಾಜ್ಯಗಳಿಗೆ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ. ಮಧುಸೂದನ್ ಮಿಸ್ತ್ರಿ, ಗೌರವ್ ಗೊಗೊಯ್, ಹಿಬಿ ಈಡೆನ್ ತಂಡದ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ. ಮಧುಸೂಧನ್ ಮಿಸ್ತ್ರಿ, ಗೌರವ್ ಗೊಗೊಯ್ ಮತ್ತು ಹಿಬಿ ಈಡನ್ ಅವರಿಗೆ ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯ ಪ್ರದರ್ಶನವನ್ನು ಮೌಲ್ಯಮಾಪನ ಮಾಡುವ ಜವಾಬ್ದಾರಿ ವಹಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಉಸ್ತುವಾರಿಯಾಗಿ ಮಹಾರಾಷ್ಟ್ರ ಚುನಾವಣೆಗೆ ಭೂಪೇಂದರ್ ಯಾದವ್, ಜಾರ್ಖಂಡ್‌ಗೆ ಶಿವರಾಜ್ ಸಿಂಗ್ ಚೌಹಾಣ್ ನೇಮಕ
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಏನು ತಪ್ಪಾಗಿದೆ ಎಂಬುದನ್ನು ವಿಶ್ಲೇಷಿಸಲು ಕಾಂಗ್ರೆಸ್ ಇಂದು 6 ಸತ್ಯಶೋಧನಾ ಸಮಿತಿಗಳನ್ನು ರಚಿಸಿದೆ. ಅಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಪ್ರದರ್ಶನ ನೀಡುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ನಿರೀಕ್ಷಿತ ಮಟ್ಟದ ಮತಗಳು ಸಿಕ್ಕಿರಲಿಲ್ಲ.
Hon’ble Congress President has constituted the fact-finding committees to assess the poor performance of the party in the following states, in the recently concluded General Elections, with immediate effect. pic.twitter.com/gQ99HQoY8F
— INC Sandesh (@INCSandesh) June 19, 2024
ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ದೆಹಲಿ, ತೆಲಂಗಾಣ ಮತ್ತು ಹರಿಯಾಣ ರಾಜ್ಯಗಳಲ್ಲಿ ಏನು ತಪ್ಪಾಗಿದೆ ಎಂಬುದನ್ನು ಕಂಡುಹಿಡಿಯಲು ಹಿರಿಯ ನಾಯಕರ ಸಮಿತಿಗಳನ್ನು ರಚಿಸಲಾಗುವುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ತಿಳಿಸಿದ ಕೆಲವೇ ದಿನಗಳಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಮಿತಿಗಳನ್ನು ರಚಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ