ದೆಹಲಿ, ಮಾರ್ಚ್ 09: ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆ ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮೈತ್ರಿ ಮಾಡಿಕೊಂಡಿದೆ. ಆ ಮೂಲಕ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ತನ್ನ ಮಿತ್ರ ಪಕ್ಷ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ತಮಿಳುನಾಡಿನ 9, ಪುದುಚೆರಿಯ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕೂಡ ಇದೇ ರೀತಿಯಾಗಿ ಒಪ್ಪಂದವಾಗಿತ್ತು. ಆಗ ಡಿಎಂಕೆ ಭರ್ಜರಿ ಗೆಲುವಿಗೆ ಕಾರಣವಾಗಿತ್ತು. ಕಾಂಗ್ರೆಸ್ 2019 ರಲ್ಲಿ ಸ್ಪರ್ಧಿಸಿದ್ದ 10ರ ಪೈಕಿ 9 ಸ್ಥಾನಗಳನ್ನು ಗೆದ್ದಿತ್ತು. ತಮಿಳುನಾಡು 39 ಲೋಕಸಭಾ ಸ್ಥಾನಗಳನ್ನು ಹೊಂದಿದೆ.
ಎಂಕೆ ಸ್ಟಾಲಿನ್, ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ. ಸೆಲ್ವಪೆರುಂತಗೈ, ಹಿರಿಯ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ಅಜೋಯ್ ಕುಮಾರ್ ಅವರ ಸಮ್ಮುಖದಲ್ಲಿ ಒಪ್ಪಂದ ಮಾಡಲಾಗಿದೆ.
ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಬಿಜೆಪಿ ವಿರೋಧಿಗಳು ಒಂದಾಗುತ್ತಿರುವುದು ಸಂತಸದ ವಿಚಾರ. ಡಿಎಂಕೆ ಜೊತೆ ಮೈತ್ರಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಡಿಎಂಕೆ ನೇತೃತ್ವದಲ್ಲಿ ಎಲ್ಲಾ 40 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ಬಾಂಧವ್ಯ ಅಖಂಡವಾಗಿದೆ. ಒಗ್ಗಟ್ಟಿನಿಂದ ಹೋರಾಡಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್‌ಪಿ ಜೊತೆ ಬಿಜೆಪಿ ಸೀಟು ಹಂಚಿಕೆಗೆ ಒಪ್ಪಂದ
ಪಕ್ಷವು ಸಾಮಾನ್ಯ ವರ್ಗ ಒಂದನ್ನು ಒಳಗೊಂಡಂತೆ ಕನಿಷ್ಠ ಮೂರು ಸ್ಥಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ ತಮಿಳುನಾಡು ಮತ್ತು ಭಾರತದ ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಈ ಬಾರಿಯೂ ಡಿಎಂಕೆ ನೇತೃತ್ವದ ಮೈತ್ರಿಕೂಟದ ಗೆಲುವನ್ನು ಗಮನದಲ್ಲಿಟ್ಟುಕೊಂಡು ಎರಡು ಮೀಸಲು ಕ್ಷೇತ್ರಗಳನ್ನು ನೀಡಲಾಗಿದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ನಾಯಕ ತುಲ್ ತಿರುಮವಲವನ್ ಹೇಳಿದ್ದಾರೆ.
ಇದನ್ನೂ ಓದಿ: Lok Sabha Election Dates: ಲೋಕಸಭೆ ಚುನಾವಣೆ ದಿನಾಂಕ ಮುಂದಿನ ಗುರುವಾರ ಪ್ರಕಟ ಸಾಧ್ಯತೆ
2019 ರ ಚುನಾವಣೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂಗೆ ಲೋಕಸಭೆ ಕ್ಷೇತ್ರ ಮತ್ತು ಒಂದು ರಾಜ್ಯಸಭಾ ಸ್ಥಾನವನ್ನು ನೀಡಿತ್ತು. ವೈಕೊ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:53 pm, Sat, 9 March 24