ಬಿಜೆಪಿ(BJP) ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹಿಂದೇಟು ಹಾಕುತ್ತಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್(Ghulam Nabi Azad) ಹೇಳಿದ್ದಾರೆ. ಬಿಜೆಪಿ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳನ್ನು ಆಜಾದ್ ತಳ್ಳಿ ಹಾಕಿದ್ದಾರೆ.
ರಾಹುಲ್ ಗಾಂಧಿ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದರು.
ಉಧಮ್‌ಪುರ ಲೋಕಸಭಾ ಕ್ಷೇತ್ರದ ಉಖ್ರಾಲ್ ಪ್ರದೇಶದ ಸಂಗಲ್‌ದಾನ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಜಾದ್, ರಾಹುಲ್ ಗಾಂಧಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಏಕೆ ಹಿಂದೆ ಸರಿಯುತ್ತಿದ್ದಾರೆ? ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ಗಾಂಧಿ ಹೇಳಿಕೊಳ್ಳುತ್ತಾರೆ, ಅವರ ನಡೆ ಬೇರೆಯದನ್ನು ಸೂಚಿಸುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಪ್ರಾಬಲ್ಯದ ರಾಜ್ಯಗಳಲ್ಲಿ ಏಕೆ ಆಶ್ರಯ ಪಡೆಯಬೇಕು ಎಂದು ಪ್ರಶ್ನಿಸಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿ ಜಿ.ಎಂ. ಸರೂರಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿರುವ ಆಜಾದ್, ಕಾಂಗ್ರೆಸ್ ನೇರ ಸವಾಲನ್ನು ಎದುರಿಸಲು ಹಿಂಜರಿಯುತ್ತಿದೆ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆಯು ಹೆಚ್ಚಿರುವ ಸುರಕ್ಷಿತ ಸ್ಥಾನಗಳನ್ನು ಹುಡುಕುವ ಪ್ರವೃತ್ತಿಯನ್ನು ಟೀಕಿಸಿದರು.
ಮತ್ತಷ್ಟು ಓದಿ: Rahul Gandhi: ಮಂಡ್ಯದಲ್ಲಿ ರಾಹುಲ್ ಗಾಂಧಿ ಅಬ್ಬರದ ಭಾಷಣ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ರಾಹುಲ್ ಹಾಗೂ ಒಮರ್ ಅಬ್ದುಲ್ಲಾರನ್ನು ಟೀಕಿಸಿದ ಅವರು, ಜೀವನದಲ್ಲಿ ವೈಯಕ್ತಿಕ ತ್ಯಾಗ ಮಾಡಿಲ್ಲ ಮತ್ತು ಇಂದಿರಾ ಗಾಂಧಿ ಮತ್ತು ಶೇಖ್ ಅಬ್ದುಲ್ಲಾ ಅವರಂತಹ ವ್ಯಕ್ತಿಗಳಿಂದ ಪಡೆದ ರಾಜಕೀಯ ಪರಂಪರೆಯನ್ನು ಆನಂದಿಸುತ್ತಿದ್ದಾರೆ. ಇಬ್ಬರೂ ಸ್ವಂತವಾಗಿ ಏನನ್ನೂ ಮಾಡಿಲ್ಲ ಎಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ