ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದವರ ಸಂಖ್ಯೆ 2014ರಲ್ಲಿ 41, ಈ ಬಾರಿ ಕೇವಲ 6

ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಪ್ರಧಾನಿ ಮೋದಿ ವಿರುದ್ಧ ಕೇವಲ 6 ಮಂದಿ ಸ್ಪರ್ಧಿಸಿದ್ದಾರೆ. 2014ರಲ್ಲಿ ಮೋದಿ ವಿರುದ್ಧ 41 ಮಂದಿ ಸ್ಪರ್ಧಿಸಿದ್ದರು.

ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದವರ ಸಂಖ್ಯೆ 2014ರಲ್ಲಿ 41, ಈ ಬಾರಿ ಕೇವಲ 6
ನರೇಂದ್ರ ಮೋದಿImage Credit source: Hindustan Times
Follow us
ನಯನಾ ರಾಜೀವ್
|

Updated on:May 28, 2024 | 9:28 AM

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ(Narendra Modi) ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದು, ಅವರ ವಿರುದ್ಧ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಸೇರಿದಂತೆ ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

2014 ರಲ್ಲಿ, ಮೋದಿ ವಾರಾಣಸಿಯಿಂದ ಮೊದಲ ಬಾರಿಗೆ ಸ್ಪರ್ಧಿಸಿ ಪ್ರಧಾನಿಯಾದಾಗ, ಅವರ ವಿರುದ್ಧ 41 ಮಂದಿ ಸ್ಪರ್ಧಿಸಿದ್ದರು. ಆದರೆ ಅದರ ಸಂಖ್ಯೆ ಈ ಬಾರಿ ಚುನಾವಣೆ ವೇಳೆಗೆ 6ಕ್ಕೆ ಇಳಿದಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಅಜಯ್ ರಾವ್ ಸೇರಿದಂತೆ 6 ಮಂದಿ ಕಣದಲ್ಲಿದ್ದಾರೆ.

ಅವರು ಆಮ್ ಆದ್ಮಿ ಪಕ್ಷದ ( ಎಎಪಿ) ಎರಡನೇ ಸ್ಥಾನದಲ್ಲಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ 3.72 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರು.

2019 ರಲ್ಲಿ, ಮೋದಿ ಮತ್ತೆ ಸ್ಥಾನದಿಂದ ಗೆದ್ದಾಗ ಮತ್ತು ಅವರ ಸರ್ಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿದಾಗ, ಪ್ರಧಾನ ಮಂತ್ರಿಯ ಗೆಲುವಿನ ಅಂತರವು 4.59 ಲಕ್ಷ ಮತಗಳಿಗೆ ಹೆಚ್ಚಾಯಿತು.

ಮತ್ತಷ್ಟು ಓದಿ: ಪಾಕಿಸ್ತಾನದಿಂದ ರಾಹುಲ್ ಗಾಂಧಿ, ಕೇಜ್ರಿವಾಲ್​ಗೆ ಬೆಂಬಲ; ಮೋದಿ ಹೇಳಿದ್ದೇನು?

ಸಮಾಜವಾದಿ ಪಕ್ಷ ಶಾಲಿನಿ ಯಾದವ್ ವಿರುದ್ಧ 4.59 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 1991ರಿಂದ ಇಲ್ಲಿಯವರೆಗೆ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಏಳು ಬಾರಿ ಗೆಲುವು ಸಾಧಿಸಿದೆ. 2004ರಲ್ಲಿ ಮಾತ್ರ ಕಾಂಗ್ರೆಸ್​ ಅಭ್ಯರ್ಥಿ ರಾಜೇಶ್​ ಕುಮಾರ್ ಮಿಶ್ರಾ ಗೆಲುವು ಸಾಧಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೂ ಮುನ್ನ ಈ ಕ್ಷೇತ್ರವನ್ನು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಪ್ರತಿನಿಧಿಸುತ್ತಿದ್ದರು.

ವಾರಾಣಸಿಯಲ್ಲಿ ಮತದಾನವು ಜೂನ್​ 1ರಂದು ಕೊನೆಯ ಹಂತದಲ್ಲಿ ನಡೆಯಲಿದೆ. ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರು, ಭೂಮಿಹಾರ್​ಗಳು ಹಾಗೂ ಜೈಸ್ವಾಲ್ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯಗಳ ನಂತರ ಮುಸ್ಲಿಂ ಹಾಗೂ ಇತರೆ ಹಿಂದುಳಿದ ವರ್ಗಗಳ ಸಮುದಾಯಗಳಿವೆ. ಜೂನ್​ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:18 am, Tue, 28 May 24

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ