AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್​ಗೆ ಗುಡ್​ಬೈ: ಕಂಗನಾ ರಣಾವತ್

ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್​ಗೆ ಗುಡ್​ಬೈ: ಕಂಗನಾ ರಣಾವತ್
ಕಂಗನಾImage Credit source: Times Now
ನಯನಾ ರಾಜೀವ್
|

Updated on: May 19, 2024 | 2:20 PM

Share

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಗೆದ್ದರೆ ಬಾಲಿವುಡ್​ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ವೈರಲ್ ಆಗುತ್ತಿರುವ ಕಂಗನಾ ಹೇಳಿಕೆಯಲ್ಲಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಹೇಳಿದ್ದಾರೆ.

ಕಳೆದ ಮಂಗಳವಾರ ಕಂಗನಾ ಚುನಾವಣೆಗೆ ಮಂಡಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಂಪೂರ್ಣ ಸಮಯವನ್ನು ಪ್ರಚಾರಕ್ಕಾಗಿ ಮೀಸಲಿಟ್ಟಿದ್ದಾರೆ. ಆಜ್​ತಕ್​ಗೆ ನೀಡಿದ್ದ ಸಂದರ್ಶನದಲ್ಲಿ, ಕಂಗನಾ ಮಂಡಿಯನ್ನು ಗೆದ್ದರೆ ಮುಂದಿನ ಯೋಜನೆಗಳೇನು ಎಂದು ಕೇಳಿದಾಗ, ನನಗೆ ಚಲನಚಿತ್ರ ನಿರ್ಮಾಪಕರು ಸಾಕಷ್ಟು ಮಂದಿ ಹೇಳಿದ್ದಾರೆ ನೀನು ಉತ್ತಮ ನಟಿ, ರಾಜಕೀಯಕ್ಕೆ ಹೋಗಬೇಡಿ ಇಲ್ಲೇ ಇರು ಎಂದು ಆದರೆ ನಾನು ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗದಿಂದ ಹೊರಬರುತ್ತೇನೆ ಎಂದರು.

ಕಂಗನಾ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಮತದಾನದ ಮೊದಲು, ನಟಿ ತನ್ನ 91 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಹಿರಂಗಪಡಿಸಿದರು. ಇದರಲ್ಲಿ ಆಭರಣಗಳು, ಕಾರುಗಳು ಮತ್ತು ಸ್ಥಿರ ಆಸ್ತಿಗಳು ಸೇರಿವೆ. ಆಕೆಯ ಸಾಲವೂ 17 ಕೋಟಿ ರೂ. ಇದೆ.

ಮತ್ತಷ್ಟು ಓದಿ: ಮತ್ತೆ ಮುಂದೂಡಿಕೆ ಆಯ್ತು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಕಂಗನಾ ಅವರು 28.7 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು 62.9 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ ಎಂಬ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ತನು ವೆಡ್ಸ್ ಮನು ನಟಿ ದೇಶಾದ್ಯಂತ ಆಸ್ತಿ ಹೊಂದಿದ್ದು, ಮುಂಬೈನಲ್ಲಿ 16 ಕೋಟಿ ರೂಪಾಯಿ ಮೌಲ್ಯದ ಮೂರು ಮನೆಗಳು ಮತ್ತು 15 ಕೋಟಿ ರೂಪಾಯಿ ಮೌಲ್ಯದ ಮನಾಲಿಯಲ್ಲಿ ಬಂಗಲೆ ಇದೆ.

ಹೆಚ್ಚುವರಿಯಾಗಿ, ಅವರು ಚಂಡೀಗಢದಲ್ಲಿ ನಾಲ್ಕು ಆಸ್ತಿಗಳನ್ನು ಹೊಂದಿದ್ದಾರೆ, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡವನ್ನು ಹೊಂದಿದ್ದಾರೆ. ಹಿಮಾಚಲಪ್ರದೇಶದಲ್ಲಿ ಜೂನ್​ 1ರಂದು ಮತದಾನ ನಡೆಯಲಿದೆ. ಕಂಗನಾ ಕೇವಲ 12ನೇ ತರಗತಿ ಪಾಸಾಗಿದ್ದಾರೆ, ಗ್ಯಾಂಗ್​ಸ್ಟರ್ ಚಿತ್ರದ ಮೂಲಕ ಕಂಗನಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್