Lok Sabha Elections 2024: ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಉತ್ತರಿಸಲು ಸಾಧ್ಯವಿಲ್ಲ ಹೀಗಾಗಿಯೇ ಬಹಿರಂಗ ಚರ್ಚೆಗೆ ಬರ್ತಿಲ್ಲ: ರಾಹುಲ್

|

Updated on: May 19, 2024 | 12:34 PM

ಪ್ರಧಾನಿ ನರೇಂದ್ರ ಮೋದಿಗೆ ಅಂಬಾನಿ, ಅದಾನಿ ಬಗ್ಗೆ ಉತ್ತರಿಸಲು ಸಾಧ್ಯವಿಲ್ಲ ಹೀಗಾಗಿಯೇ ಬಹಿರಂಗ ಚರ್ಚೆಗೆ ಬರುತ್ತಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ತಮ್ಮ ಆಪ್ತ ಉದ್ಯಮಿಗಳ ಬಗ್ಗೆ ಮತ್ತು ಚುನಾವಣಾ ಬಾಂಡ್​ಗಳನ್ನು ಹೇಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದ ಕಾರಣ ಮೋದಿ ಚರ್ಚೆಗೆ ಬರುತ್ತಿಲ್ಲ.

Lok Sabha Elections 2024: ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಉತ್ತರಿಸಲು ಸಾಧ್ಯವಿಲ್ಲ ಹೀಗಾಗಿಯೇ ಬಹಿರಂಗ ಚರ್ಚೆಗೆ ಬರ್ತಿಲ್ಲ: ರಾಹುಲ್
ರಾಹುಲ್ ಗಾಂಧಿ
Follow us on

ಪ್ರಧಾನಿ ನರೇಂದ್ರ ಮೋದಿ(Narendra Modi)ಗೆ ಅಂಬಾನಿ, ಅದಾನಿ ಬಗ್ಗೆ ಉತ್ತರಿಸಲು ಸಾಧ್ಯವಿಲ್ಲ ಹೀಗಾಗಿಯೇ ಬಹಿರಂಗ ಚರ್ಚೆಗೆ ಬರುತ್ತಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ತಮ್ಮ ಆಪ್ತ ಉದ್ಯಮಿಗಳ ಬಗ್ಗೆ ಮತ್ತು ಚುನಾವಣಾ ಬಾಂಡ್​ಗಳನ್ನು ಹೇಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದ ಕಾರಣ ಮೋದಿ ಚರ್ಚೆಗೆ ಬರುತ್ತಿಲ್ಲ.

ಕೆಲವು ದಿನಗಳ ಹಿಂದೆ ಮೋದಿ ತಾನು ಚಿಕ್ಕವನಿದ್ದಾಗ ಮುಸ್ಲಿಂ ಬಾಂಧವರು ಈದ್ ವೇಳೆ ಊಟ ಕಳುಹಿಸುತ್ತಿದ್ದರು ಎಂದು ಹೇಳುತ್ತಿದ್ದರು. ನೀವು ಸಸ್ಯಾಹಾರಿಗಳಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಾನು ಪ್ರಧಾನಿಯನ್ನು ಚರ್ಚೆಗೆ ಆಹ್ವಾನಿಸಿ ಒಂದು ವಾರವಾಗಿದೆ, ಇದುವರೆಗೂ ಅವರ ಕಡೆಯಿಂದ ಉತ್ತರ ಬಂದಿಲ್ಲ ಎಂದು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಚರ್ಚೆ ಅಗತ್ಯವಾಗಿದ್ದು, ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಬೇಕು ಎಂದು ನರೇಂದ್ರ ಮೋದಿಯವರಿಗೆ ಹಲವರು ಪತ್ರ ಬರೆದಿದ್ದಾರೆ. ನಾನು ಸಿದ್ಧ, ನರೇಂದ್ರ ಮೋದಿ ಅವರು ಎಲ್ಲಿ ಬೇಕಾದರೂ ನನ್ನೊಂದಿಗೆ ಚರ್ಚೆ ನಡೆಸಬಹುದು. ಆದರೆ ಅವರೇ ನನ್ನೊಂದಿಗೆ ಚರ್ಚಿಸಲು ಬರುತ್ತಿಲ್ಲ ಎಂದಿದ್ದಾರೆ.

ಮತ್ತಷ್ಟು ಓದಿ: ಮೋದಿ ಮತ್ತೆ ಪ್ರಧಾನಿಯಾದರೆ 6 ತಿಂಗಳೊಳಗೆ ಪಿಒಕೆ ಭಾರತಕ್ಕೆ ಸೇರಲಿದೆ; ಸಿಎಂ ಯೋಗಿ ಭರವಸೆ

ದೆಹಲಿಯ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಮತ್ತು ನಾಲ್ಕು ಸ್ಥಾನಗಳಲ್ಲಿ ಎಎಪಿ ಅಭ್ಯರ್ಥಿಗಳಿಗೆ ಮತ ಹಾಕುವಂತೆ ನಾನು ಕಾಂಗ್ರೆಸ್​ ಕಾರ್ಯಕರ್ತರನ್ನು ಕೋರುತ್ತೇನೆ, ಅದೇ ರಿತಿ ನಾಲ್ಕು ಸ್ಥಾನಗಳಲ್ಲಿ ತಮ್ಮ ಪಕ್ಷದ ನಾಯಕರಿಗೆ ಮತ್ತು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಎಎಪಿ ಕಾರ್ಯಕರ್ತರ ಬಳಿ ಮನವಿ ಮಾಡುತ್ತೇನೆ ಎಂದರು.

ಸಣ್ಣ ಉದ್ಯಮಿಗಳಿಗೆ ಪ್ರಧಾನಿ ಮೋದಿ ಏನೂ ಮಾಡಿಲ್ಲ, ಆದರೆ ಅದಾನಿ, ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ರೂ. ನೀಡಿದ್ದಾರೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ನಾವು ಜಿಎಸ್​ಟಿಯನ್ನು ಸರಳೀಕರಿಸುತ್ತೇವೆ ನತ್ತು ದೊಡ್ಡ ಕೈಗಾರಿಕೋದ್ಯಮಿಗಳಿಗಿಂತ ಸಣ್ಣ ಉದ್ಯಮಿಗಳಿಗೆ ಸಹಾಯ ಮಾಡುತ್ತೇವೆ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ