Lok Sabha Elections 2024: ಲೋಕಸಭೆ ಚುನಾವಣೆ: ಉತ್ತರ ಪ್ರದೇಶದಿಂದಲೇ ಚುನಾವಣಾ ರ್‍ಯಾಲಿ ಆರಂಭಿಸಲಿದ್ದಾರೆ ಪ್ರಧಾನಿ ಮೋದಿ

|

Updated on: Jan 24, 2024 | 3:16 PM

ಉತ್ತರ ಪ್ರದೇಶದಲ್ಲಿ ರಾಮಮಂದಿರ(Ram Mandir) ನಿರ್ಮಾಣ ಕನಸು ನನಸಾಗಿಸಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ಮಾಡಿ ಮುಗಿಸಿರುವ ಪ್ರಧಾನಿ ಮೋದಿಯದ್ದೇ ಮಾತು ಎಲ್ಲೆಲ್ಲೂ. ಇದೀಗ ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾಮನ ಆಶೀರ್ವಾದ ಪಡೆದು ಉತ್ತರ ಪ್ರದೇಶದಿಂದಲೇ ಚುನಾವಣಾ ರ್‍ಯಾಲಿಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Lok Sabha Elections 2024: ಲೋಕಸಭೆ ಚುನಾವಣೆ: ಉತ್ತರ ಪ್ರದೇಶದಿಂದಲೇ ಚುನಾವಣಾ ರ್‍ಯಾಲಿ ಆರಂಭಿಸಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ
Image Credit source: The Wire
Follow us on

ಉತ್ತರ ಪ್ರದೇಶದಲ್ಲಿ ರಾಮಮಂದಿರ(Ram Mandir) ನಿರ್ಮಾಣ ಕನಸು ನನಸಾಗಿಸಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ಮಾಡಿ ಮುಗಿಸಿರುವ ಪ್ರಧಾನಿ ಮೋದಿಯದ್ದೇ ಮಾತು ಎಲ್ಲೆಲ್ಲೂ. ಇದೀಗ ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾಮನ ಆಶೀರ್ವಾದ ಪಡೆದು ಉತ್ತರ ಪ್ರದೇಶದಿಂದಲೇ ಚುನಾವಣಾ ರ್‍ಯಾಲಿಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ಜನವರಿ 25ರಂದು ಚುನಾವಣಾ ರ್‍ಯಾಲಿಗೆ ಚಾಲನೆ ದೊರೆಯಲಿದೆ.
ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಪಶ್ಚಿಮ ಉತ್ತರ ಪ್ರದೇಶದ ನಗರದಲ್ಲಿ ಗಣನೀಯ ಪ್ರಮಾಣದ ಮತದಾನದ ನಿರೀಕ್ಷೆಯಿದೆ.

2019 ರಲ್ಲಿ ಆರು ಕ್ಷೇತ್ರಗಳಲ್ಲಿ ಸೋಲನ್ನು ಎದುರಿಸಿರುವ ಬಿಜೆಪಿಯು ಪ್ರಸ್ತುತ ಪಶ್ಚಿಮ ಉತ್ತರ ಪ್ರದೇಶದ 14 ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಹೊಂದಿದೆ ಎಂಬುದು ಗಮನಾರ್ಹ. ಹಿಂದೆ ಸ್ಪರ್ಧಿಸಿದ ಕ್ಷೇತ್ರಗಳಲ್ಲಿ ಮತದಾರರು ಮತ್ತು ಬೆಂಬಲಿಗರೊಂದಿಗೆ ಸಂಪರ್ಕ ಸಾಧಿಸಲು, ಬುಲಂದ್‌ಶಹರ್‌ನಿಂದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುವ ಗುರಿಯನ್ನು ಪಿಎಂ ಮೋದಿ ಹೊಂದಿದ್ದಾರೆ.

ಮತ್ತಷ್ಟು ಓದಿ: ರಾಜಿ ಮಾಡಿಕೊಳ್ಳುವುದಿಲ್ಲ, ಪಂಜಾಬ್​​​ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಏಕಾಂಗಿ ಸ್ಪರ್ಧೆ: ಭಗವಂತ್ ಮಾನ್

ಬುಲಂದ್‌ಶಹರ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಸುಮಾರು ಐದು ಲಕ್ಷ ಜನರು ಭಾಗವಹಿಸುವ ನಿರೀಕ್ಷ ಇದೆ ಎಂದು ಬಿಜೆಪಿ ಹೇಳಿಕೊಂಡಿದೆ. ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ಲೋಕದಳದೊಂದಿಗೆ ಮೈತ್ರಿಯನ್ನು ಘೋಷಿಸಿದ ಒಂದು ದಿನದ ನಂತರ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ರಾಜ್ಯದಲ್ಲಿ ಸೀಟು ಹಂಚಿಕೆ ಸೂತ್ರವನ್ನು ನಿರ್ಧರಿಸಲು ಕಾಂಗ್ರೆಸ್‌ನೊಂದಿಗೆ ಹೆಚ್ಚಿನ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅಖಿಲೇಶ್ ಯಾದವ್ ಲಕ್ನೋದಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಮತ್ತು ಮಾಜಿ ಎಂಎಲ್‌ಸಿಗಳನ್ನು ಒಳಗೊಂಡ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು. ಹೊಸ ಮತದಾರರ ಪಟ್ಟಿಯಲ್ಲಿ ಪಕ್ಷದ ಬೆಂಬಲಿಗರಾಗಿರುವ ಮತದಾರರ ನೋಂದಣಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಯಾದವ್ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರವು ಪಕ್ಷದ ಕೆಲವು ಕಾರ್ಯಕರ್ತರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿದೆ ಎಂದು ಆರೋಪಿಸಿದರು. ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಸೀಟು ಹಂಚಿಕೆ ಮಾತುಕತೆ ನಡೆಸಿದೆ.

ಲೋಕಸಭೆ ಚುನಾವಣೆ 2024
18 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು ಏಪ್ರಿಲ್ ಮತ್ತು ಮೇ ನಡುವೆ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ . 17ನೇ ಲೋಕಸಭೆಯ ಅಧಿಕಾರಾವಧಿಯು ಜೂನ್‌ನಲ್ಲಿ ಕೊನೆಗೊಳ್ಳಲಿದೆ. ಹಿಂದಿನ ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್-ಮೇ 2019 ರಲ್ಲಿ ನಡೆದಿತ್ತು. ಚುನಾವಣೆಯ ನಂತರ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು, ನರೇಂದ್ರ ಮೋದಿ ಅವರು ಎರಡನೇ ನೇರ ಅವಧಿಗೆ ಪ್ರಧಾನಿಯಾಗಿ ಮುಂದುವರಿಯುತ್ತಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ