Lok Sabha Election: ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧೆ, ಅಮೇಥಿಯಲ್ಲಿ ಯಾರು?

ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ವಯನಾಡಿನಿಂದ ಸ್ಪರ್ಧಿಸಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇದೀಗ ರಾಯ್​ಬರೇಲಿಯಿಂದಲೂ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

Lok Sabha Election: ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧೆ, ಅಮೇಥಿಯಲ್ಲಿ ಯಾರು?
ರಾಹುಲ್ ಗಾಂಧಿImage Credit source: Mint
Follow us
ನಯನಾ ರಾಜೀವ್
|

Updated on:May 03, 2024 | 8:16 AM

ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ಅಮೇಥಿ ಬದಲಿಗೆ ಉತ್ತರ ಪ್ರದೇಶದ ರಾಯ್​ಬರೇಲಿ(Raebareli) ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾರ ಹೆಸರು ಕೇಳಿಬಂದಿದೆ. ರಾಹುಲ್​ ಗಾಂಧಿ ರಾಯ್​ಬರೇಲಿ ಹೊರತಾಗಿ ಕೇರಳದ ವಯನಾಡಿನಿಂದಲೂ ಸ್ಪರ್ಧಿಸಿದ್ದು ಅಲ್ಲಿ ಚುನಾವಣೆ ಮುಗಿದಿದೆ. ರಾಯ್​ ಬರೇಲಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ. ವಯನಾಡಿನಲ್ಲಿ ಏಪ್ರಿಲ್​ 26ರಂದು ಚುನಾವಣೆ ನಡೆದಿತ್ತು. ಇಷ್ಟು ದಿನಗಳ ಕಾಲ ಇದ್ದ ಸಸ್ಪೆನ್ಸ್​ ಇಂದು ಕೊನೆಗೊಂಡಿದೆ ಪ್ರಿಯಾಂಕಾ ಗಾಂಧಿ ಎಲ್ಲೂ ಸ್ಪರ್ಧಿಸುತ್ತಿಲ್ಲ ಎಂಬುದೂ ತಿಳಿದುಬಂದಿದೆ.

ಬಿಜೆಪಿಯು ದಿನೇಶ್​ ಪ್ರತಾಪ್ ಸಿಂಗ್ ಅವರನ್ನು ರಾಯ್​ಬರೇಲಿಯಿಂದ ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಂಗ್​ ಸೋನಿಯಾ ವಿರುದ್ಧ ಸೋತಿದ್ದರು. ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್​ಬರೇಲಿ ಕಾಂಗ್ರೆಸ್​ನ ಭದ್ರಕೋಟೆಗಳಾಗಿದ್ದವು.

ರಾಹುಲ್ ಗಾಂಧಿ 2004ರಿಂದ 2019ರವರೆಗೆ ಸತತ ಮೂರು ಅವಧಿಗೆ ಅಮೇಥಿಯನ್ನು ಪ್ರತಿನಿಧಿಸಿದ್ದರು. ಅವರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಕೊನೆಗೆ ಸೋಲು ಅನುಭವಿಸಿದರು.

ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿ ಹೇಳಿದ 10 ಸುಳ್ಳುಗಳು

ರಾಹುಲ್​ ಗಾಂಧಿಗಿಂತ ಮೊದಲು ಅವರು ತಾಯಿ ಸೋನಿಯಾ ಗಾಂಧಿ 1999-2004ರವರೆಗೆ ಅಮೇಥಿಯನ್ನು ಪ್ರತಿನಿಧಿಸಿದ್ದರು. ಸೋನಿಯಾಗಿಂತ ಮೊದಲು ಸಂಜಯ್​ ಗಾಂಧಿ ಹಾಗೂ ರಾಜೀವ್​ ಗಾಂಧಿ ಪ್ರತಿನಿಧಿಸಿದ್ದರು.

ಮತ್ತೊಂದೆಡೆ ರಾಯ್​ ಬರೇಲಿಯನ್ನು 2004 ರಿಂದ 2024ರವರೆಗೆ ಸುಮಾರು ಎರಡು ದಶಕಗಳ ಕಾಲ ಸೋನಿಯಾ ಗಾಂಧಿ ಪ್ರತಿನಿಧಿಸಿದ್ದರು. ಈ ವರ್ಷದ ಆರಂಭದಲ್ಲಿ ಮಾಜಿ ಕಾಂಗ್ರೆಸ್​ ಅಧ್ಯಕ್ಷೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಅನಾರೋಗ್ಯದ ನೆಪವೊಡ್ಡಿ ರಾಜ್ಯಸಭೆಗೆ ತೆರಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Fri, 3 May 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ