Lok Sabha Elections: 2024ರಲ್ಲಿ ಮಾತ್ರವಲ್ಲ 2029ರಲ್ಲೂ ಮೋದಿಯೇ ಭಾರತದ ಪ್ರಧಾನಿ: ರಾಜನಾಥ್​ ಸಿಂಗ್

|

Updated on: May 22, 2024 | 9:12 AM

ನರೇಂದ್ರ ಮೋದಿಯವರು 2029ರಲ್ಲೂ ಪ್ರಧಾನಿಯಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹೇಳಿದ್ದಾರೆ. ಟೈಮ್ಸ್​ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 2029ರಲ್ಲೂ ಮೋದಿಯೇ ಪ್ರಧಾನಿಯಾಗಲಿದ್ದಾರೆ, ಅವರು ಮುಂದಾಳತ್ವದಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ಅವರು ಪ್ರಧಾನಿಯಾಗಿ ಮುಂದುವರೆಯಬೇಕು ಎನ್ನುವುದು ದೇಶದ ಜನತೆಯ ಆಶಯ ಎಂದರು.

Lok Sabha Elections: 2024ರಲ್ಲಿ ಮಾತ್ರವಲ್ಲ 2029ರಲ್ಲೂ ಮೋದಿಯೇ ಭಾರತದ ಪ್ರಧಾನಿ: ರಾಜನಾಥ್​ ಸಿಂಗ್
ರಾಜನಾಥ್​ ಸಿಂಗ್
Follow us on

ಕೇವಲ 2024ರಲ್ಲಿ ಮಾತ್ರವಲ್ಲ 2029ರಲ್ಲಿಯೂ ನರೇಂದ್ರ ಮೋದಿ(Narendra Modi)ಯೇ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹೇಳಿದ್ದಾರೆ. ಟೈಮ್ಸ್​ ಆಫ್​ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಿಂಗ್, 75 ವರ್ಷ ಮೇಲ್ಪಟ್ಟವರು ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎನ್ನುವ ನಿರ್ಧಾರವನ್ನು ಎಂದೂ ತೆಗೆದುಕೊಂಡಿಲ್ಲ. ಒಂದು ವೇಳೆ ಅಂಥಾ ನಿರ್ಧಾರ ಕೈಗೊಂಡಿದ್ದರೆ ಪಕ್ಷದ ನಿಯಮಗಳಲ್ಲಿ ಅದೂ ನಮೂದಿಸಲಾಗುತ್ತಿತ್ತು.

ಹಾಗಿದ್ದಿದ್ದರೆ ಎಲ್​ಕೆ ಅಡ್ವಾಣಿ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಲಿಲ್ಲ, 75 ವರ್ಷ ಮೇಲ್ಪಟ್ಟವರು 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ ಎಂದು ಹೇಳಿದ್ದಾರೆ.

ಭಾರತ ಎಂದಿಗೂ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಅಥವಾ ಅದರ ಭೂಮಿಯನ್ನು ವಶಪಡಿಸಿಕೊಂಡಿಲ್ಲ, ಆದರೆ ನಮ್ಮ ಭೂಮಿಯನ್ನು ನಾವು ಹಿಂಪಡೆಯದೇ ಬಿಡುವುದಿಲ್ಲ ಎಂದರು.

ತಮಿಳುನಾಡು ಹಾಗೂ ಕೇರಳದಲ್ಲಿಯೂ ಸಾಕಷ್ಟು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ನಮ್ಮ ಪಕ್ಷ ದೊಡ್ಡ ಗೆಲುವು ಸಾಧಿಸುವುದರಲ್ಲಿ ಸಂಶಯವಿಲ್ಲ ಎಂದು ರಾಜನಾಥ್​ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಓದಿ: ಇಂಡಿಯಾ ಒಕ್ಕೂಟ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ್ದವು; ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಮೋದಿ ಪ್ರಧಾನಿಯಾಗಲಿದ್ದಾರೆ ಎಂಬುದನ್ನು ಮಂಡಳಿ ಈಗಾಗಲೇ ಪ್ರಕಟಿಸಿದೆ, 2029ರಲ್ಲೂ ಮೋದಿಯೇ ಪ್ರಧಾನಿಯಾಗಲಿದ್ದಾರೆ, ಅವರು ಮುಂದಾಳತ್ವದಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ಅವರು ಪ್ರಧಾನಿಯಾಗಿ ಮುಂದುವರೆಯಬೇಕು ಎನ್ನುವುದು ದೇಶದ ಜನತೆಯ ಆಶಯ ಎಂದರು.

ಲೋಕಸಭಾ ಚುನಾವಣೆಯ ಐದು ಹಂತಗಳ ಮತದಾನ ಪೂರ್ಣಗೊಂಡಿದ್ದು ಮೇ 25 ರಂದು ಆರನೇ ಹಂತ ಹಾಗೂ ಜೂನ್ 1ರಂದು ಏಳನೇ ಹಂತದ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ