Ujjwal Nikam: ಉಗ್ರ ಕಸಬ್​ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್​ಗೆ ಬಿಜೆಪಿ ಟಿಕೆಟ್

26/11 Mumbai Attack Lawyer BJP Candidate from Mumbai North Central constituency: 26/11ರ ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್​​ನನ್ನು ಗಲ್ಲಿಗೇರಿಸುವಂತೆ ಮಾಡಲು ಸರ್ಲಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಲೋಕಸಭೆ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಪೂನಂ ಮಹಾಜನ್​ಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ.

Ujjwal Nikam: ಉಗ್ರ ಕಸಬ್​ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್​ಗೆ ಬಿಜೆಪಿ ಟಿಕೆಟ್
ಉಜ್ವಲ್ ನಿಕಮ್ & ಅಜ್ಮಲ್ ಕಸಬ್​​
Follow us
Ganapathi Sharma
|

Updated on:Apr 27, 2024 | 6:14 PM

ನವದೆಹಲಿ, ಏಪ್ರಿಲ್ 27: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, ಸಂಸದೆ ಪೂನಂ ಮಹಾಜನ್​ಗೆ (Poonam Mahajan) ಟಿಕೆಟ್ ನೀಡಿಲ್ಲ. 26/11ರ ಮುಂಬೈ ದಾಳಿಯ (Mumbai Attack) ಉಗ್ರ ಅಜ್ಮಲ್ ಕಸಬ್​​ನನ್ನು (Ajmal Kasab) ಗಲ್ಲಿಗೇರಿಸುವಂತೆ ಮಾಡಲು ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ (Ujjwal Nikam) ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ. ಉಜ್ವಲ್ ನಿಕಮ್ ದೇಶದ ಅತ್ಯಂತ ಪ್ರಸಿದ್ಧ ಸರ್ಕಾರಿ ವಕೀಲರಲ್ಲಿ ಒಬ್ಬರಾಗಿದ್ದರು. ಅವರು ಭಯೋತ್ಪಾದಕ ಅಜ್ಮಲ್ ಕಸಬ್‌ನನ್ನು ಗಲ್ಲಿಗೇರಿಸಲು ಸಂಬಂಧಪಟ್ಟಂತೆ ವಾದ ಮಂಡಿಸಿದ್ದು, 1993 ರ ಸರಣಿ ಬಾಂಬ್ ಸ್ಫೋಟ, ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ ಮತ್ತು ಪ್ರಮೋದ್ ಮಹಾಜನ್ ಹತ್ಯೆಯಂಥ ಉನ್ನತ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.

ಪೂನಂ ಮಹಾಜನ್​ಗೆ ಕೈತಪ್ಪಿದ್ದೇಕೆ ಟಿಕೆಟ್?

ಅನೇಕ ಸಮೀಕ್ಷೆಗಳಲ್ಲಿ ಸಂಸದೆ ಪೂನಂ ಮಹಾಜನ್​ ಬಗ್ಗೆ ನಕಾರಾತ್ಮಕ ಅಭಿಪ್ರಾಯ ವ್ಯಕ್ತವಾಗಿದ್ದರಿಂದ ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಡಲು ಬಿಜೆಪಿ ನಿರ್ಧರಿಸಿದೆ. ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ಅವರ ಹೆಸರು ಕೂಡ ಚರ್ಚೆಯಾಗಿದ್ದು, ಅವರು ಚನಾವಣೆಯಲ್ಲಿ ಕಣಕ್ಕಿಳಿಯಲು ನಿರಾಕರಿಸಿದ್ದರು ಎನ್ನಲಾಗಿತ್ತು. ಈ ಸ್ಥಾನಕ್ಕಾಗಿ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಸಹ ಬಿಜೆಪಿ ಸಂಪರ್ಕಿಸಿತ್ತು ಎಂದು ಕೆಲವು ಮೂಲಗಳು ಹೇಳಿವೆ. 2009 ರಿಂದ 2014 ರವರೆಗೆ ಸಂಸದರಾಗಿದ್ದ ಕಾಂಗ್ರೆಸ್‌ನ ಪ್ರಿಯಾ ದತ್ ಅವರನ್ನು ಸೋಲಿಸಿ ಪೂನಂ ಮಹಾಜನ್ 2014 ಮತ್ತು 2019 ರಲ್ಲಿ ಸಂಸದೆಯಾಗಿದ್ದರು.

ಪೂನಂ ಮಹಾಜನ್ 2006 ರಲ್ಲಿ ತನ್ನ ತಂದೆ ಪ್ರಮೋದ್ ಮಹಾಜನ್ ಹತ್ಯೆಯ ನಂತರ ಬಿಜೆಪಿ ಸೇರಿದ್ದರು. 2009 ರಲ್ಲಿ, ಅವರು ಮೊದಲ ಬಾರಿಗೆ ಘಾಟ್ಕೋಪರ್ ಪಶ್ಚಿಮದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಸೋತರು. 2014 ರಲ್ಲಿ ಅವರು ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಿಯಾ ದತ್ ಅವರನ್ನು ಸೋಲಿಸಿದರು.

ಇದನ್ನೂ ಓದಿ: ಕಾಂಗ್ರೆಸ್​​​ಗೆ ನಮ್ಮ ಮತ ಬೇಕು, ಆದರೆ ಮುಸ್ಲಿಮರ ನಾಯಕತ್ವ ಬೇಡ: ಕಾಂಗ್ರೆಸ್​​ ನಾಯಕ

ಪೂನಂ ಮಹಾಜನ್ ಅಮೆರಿಕದ ಟೆಕ್ಸಾಸ್‌ನಲ್ಲಿ ಪೈಲಟ್ ತರಬೇತಿ ಪಡೆದಿದ್ದು, ವೃತ್ತಿನಿರತ ಪೈಲಟ್ ಆಗಿದ್ದವರು. ಅವರು ಸುಮಾರು 300 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದಾರೆ. 2012 ರಲ್ಲಿ ಬ್ರೈಟನ್ ಸ್ಕೂಲ್ ಆಫ್ ಬ್ಯುಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್‌ನಿಂದ ಬಿಟೆಕ್ ಪದವಿಯನ್ನು ಪೂರ್ಣಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:54 pm, Sat, 27 April 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ