ಚುನಾವಣಾ ಪ್ರಚಾರ ವೇಳೆ ಬೈಕ್​ ಸವಾರಿ, ಕಾರ್ಯಕರ್ತರೊಂದಿಗೆ ಚಹಾ ಕುಡಿದ ಧರ್ಮೇಂದ್ರ ಪ್ರಧಾನ್

ಶನಿವಾರ ಚುನಾವಣಾ ಪ್ರಚಾರದ ವೇಳೆ ಅವರು ಬೈಕ್​ನಲ್ಲಿ ತೆರಳಿದ್ದಾರೆ. ಅಷ್ಟೇ ಅಲ್ಲದೆ ಸಂಬಲ್‌ಪುರದ ಅಂಗಡಿಯೊಂದರಲ್ಲಿ ಕಾರ್ಯಕರ್ತರೊಂದಿಗೆ ಚಹಾ ಕುಡಿದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರೊಂದಿಗೆ ಆತ್ಮೀಯವಾಗಿ ಮಾತನಾಡಿದರು. ಮತದಾರರನ್ನು ಸೆಳೆಯಲು ಧರ್ಮೇಂದ್ರ ಪ್ರಧಾನ್ ಅವರು ಬೈಕ್​​ ಚಲಾಯಿಸುವ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.

ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣೆ ಹಿಡಿಯುವ ಗುರಿ ಹೊಂದಿರುವ ಭಾರತೀಯ ಜನತಾ ಪಕ್ಷ ತನ್ನ ಕಾರ್ಯತಂತ್ರಗಳನ್ನು ಚುರುಕುಗೊಳಿಸುವ ಮೂಲಕ ಜನರನ್ನು ತನ್ನೆಡೆಗೆ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಒಡಿಶಾದ ಸಂಬಲ್‌ಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಕೂಡ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ಬೈಕ್​ ಚಲಾಯಿಸುವ ಮೂಲಕ ತಮ್ಮದೇ ಶೈಲಿಯಲ್ಲಿ ಮತಯಾಚನೆ ಮಾಡಿದ್ದಾರೆ.

ಶನಿವಾರ ಚುನಾವಣಾ ಪ್ರಚಾರದ ವೇಳೆ ಅವರು ಬೈಕ್​ನಲ್ಲಿ ತೆರಳಿದ್ದಾರೆ. ಅಷ್ಟೇ ಅಲ್ಲದೆ ಸಂಬಲ್‌ಪುರದ ಅಂಗಡಿಯೊಂದರಲ್ಲಿ ಕಾರ್ಯಕರ್ತರೊಂದಿಗೆ ಚಹಾ ಕುಡಿದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರೊಂದಿಗೆ ಆತ್ಮೀಯವಾಗಿ ಮಾತನಾಡಿದರು. ಮತದಾರರನ್ನು ಸೆಳೆಯಲು ಧರ್ಮೇಂದ್ರ ಪ್ರಧಾನ್ ಅವರು ಬೈಕ್​​ ಚಲಾಯಿಸುವ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.

ಇದನ್ನೂ ಓದಿ: ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್​ನವರು ಬರಲಿಲ್ಲ: ಮೋದಿ ಕಿಡಿ

ಇದಲ್ಲದೆ, ಅಗ್ನಿವೀರ್ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿದರು. ಆಕಾಂಕ್ಷಿಗಳ ಸಿದ್ಧತೆಗಳ ಬಗ್ಗೆ ವಿಚಾರಿಸಿದ ಅವರು, ಅವರಿಗೆ ಪ್ರೇರಣೆ ನೀಡುವ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಒಡಿಶಾದಲ್ಲಿ ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಾಲ್ಕು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. 543 ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19, ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಂತ ಜೂನ್‌ನಲ್ಲಿ ಪೂರ್ಣಗೊಳ್ಳಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.