Lok Sabha election 2024: ಮಾ.16ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ
ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ದೆಹಲಿ, ಮಾ.15: ಲೋಕಸಭೆ ಚುನಾವಣಾ (Lok Sabha election) ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು (ಮಾ.15) ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.
ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ. ಈ ಸಮಯಲ್ಲಿ ಇದೀಗ ನೂತನ ಆಯುಕ್ತರ ನೇಮಕದ ಮಾಡಿ. ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡದಿದ್ದಾರೆ. ಇದರ ಜತೆಗೆ 18ನೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬಗ್ಗೆ ತಿಳಿಸಿದೆ.
ಲೋಕಸಭೆ ಚುನಾವಣೆ 2019
2019ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಗೆಲುವು ಸಾಧಿಸಿತು, 303 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತು. ಮತದಾನದ ಪ್ರಮಾಣವು 67% ಹೆಚ್ಚಿಸಿತ್ತು. ಮಹಿಳಾ ಮತದಾರರ ಭಾಗವಹಿಸುವಿಕೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಬಿಜೆಪಿ ಈ ಹಿಂದೆ 37.36% ಮತಗಳನ್ನು ಹಾಗೂ 1989ರಿಂದ ಅದರ ಅತ್ಯಧಿಕ ಮತಗಳನ್ನು ಪಡೆದಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಒಟ್ಟು 353 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ ವಿರೋಧ ಪಕ್ಷದಲ್ಲೂ ಕುಳಿತುಕೊಳ್ಳುವಷ್ಟು ಮತದಾನ ಪಡೆದಿರಲಿಲ್ಲ. ವಿರೋಧ ಪಕ್ಷದ ನಾಯಕತ್ವವನ್ನು ಪಡೆಯಲು 10% ಕ್ಕಿಂತ ಕಡಿಮೆ ಮತಗಳನ್ನು ಪಡೆದಿತ್ತು. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA) 91 ಸ್ಥಾನಗಳನ್ನು ಪಡೆದುಕೊಂಡಿತು ಮತ್ತು ಇತರ ಪಕ್ಷಗಳು 98 ಸ್ಥಾನಗಳನ್ನು ಗೆದ್ದವು.
ಇದನ್ನೂ ಓದಿ: ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೇಮಕ
ಲೋಕಸಭೆ ಚುನಾವಣೆ 2014
ಏಪ್ರಿಲ್ 7 ರಿಂದ ಮೇ 12, 2014 ರವರೆಗೆ ಒಂಬತ್ತು ಹಂತಗಳಲ್ಲಿ ನಡೆದ ಚುನಾವಣೆ ಇದಾಗಿತ್ತು. ಈ ಚುನಾವಣೆಯಲ್ಲಿ 282 ಸ್ಥಾನಗಳನ್ನು ಗೆದ್ದು, ಎನ್‌ಡಿಎ ಒಟ್ಟು 336 ಸ್ಥಾನಗಳನ್ನು ಗಳಿಸಿತು.ಬಿಜೆಪಿಯ ಮತ ಹಂಚಿಕೆಯು 31% ಆಗಿತ್ತು. ಇದರ ಹೊರತಾಗಿಯೂ, ಆಡಳಿತದ ಒಕ್ಕೂಟವು 1984 ರ ಚುನಾವಣೆಗಳ ನಂತರ ಅತಿದೊಡ್ಡ ಬಹುಮತವನ್ನು ಗಳಿಸಿತು. ಈ ಚುನಾವಣೆಯಲ್ಲೂ ಕಾಂಗ್ರೆಸ್ ಅತ್ಯಂತ ಕಳಪೆ ಪ್ರದರ್ಶನವನ್ನು ಮಾಡಲಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:36 pm, Fri, 15 March 24