ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್​ ಜೈಲಿಗೆ ತೆರಳಬೇಕಿದೆ. ಅವರ ಮಧ್ಯಂತರ ಜಾಮೀನು ಅವಧಿ ಮುಗಿದಿದೆ. ಅವರು 21 ದಿನಗಳ ಕಾಲ ಜಾಮೀನಿನ ಮೇಲೆ ಹೊರಗಿದ್ದರು.

ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?
ಅರವಿಂದ್ ಕೇಜ್ರಿವಾಲ್
Follow us
ನಯನಾ ರಾಜೀವ್
|

Updated on: Jun 02, 2024 | 9:29 AM

ಒಂದೆಡೆ ಲೋಕಸಭಾ ಚುನಾವಣೆಯೂ ಮುಕ್ತಾಯಗೊಂಡಿದೆ, ಮತ್ತೊಂದೆಡೆ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ಜಾಮೀನು ಅವಧಿ ಕೂಡ ಅಂತ್ಯಗೊಂಡಿದ್ದು ಇಂದು ತಿಹಾರ್​ ಜೈಲಿಗೆ ಮರಳಲಿದ್ದಾರೆ. ಅದಕ್ಕೂ ಮುನ್ನ ತಮ್ಮ ಪಕ್ಷದ ನಾಯಕರೊಂದಿಗೆ ಚಿಂತನ-ಮಂಥನ ನಡೆಸಿದರು.

ಗಂಭೀರ ಅನಾರೋಗ್ಯದ ಶಂಕೆ ವ್ಯಕ್ತಪಡಿಸಿರುವ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್​ ಮೊರೆ ಹೋಗಿದ್ದರು, ಅರ್ಜಿಯ ಆದೇಶವನ್ನು ಕೋರ್ಟ್​ ಜೂನ್​ 5ಕ್ಕೆ ಮುಂದೂಡಿದೆ.

ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ತಿಹಾರ್ ಜೈಲಿಗೆ ಹೋಗುವ ಮೊದಲು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ, ಡಿಡಿಯು ಮಾರ್ಗದಲ್ಲಿರುವ ಪಕ್ಷದ ಕಚೇರಿ ಮತ್ತು ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಅವರು ತಮ್ಮ ಅನುಪಸ್ಥಿತಿಯಲ್ಲಿ ಪಕ್ಷದ ಒಗ್ಗಟ್ಟು ಕಾಪಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ

ಅರವಿಂದ್ ಕೇಜ್ರಿವಾಲ್​ 55 ದಿನಗಳ ಕಾಲ ಜೈಲಿನಲ್ಲಿದ್ದ ಬಳಿಕ ಮೇ 10ರಂದು ಜಾಮೀನಿನ ಮೇಲೆ ಹೊರಬಂದಿದ್ದರು. ಅವರು 10 ದಿನಗಳ ಕಾಲ ಇಡಿ ವಶದಲ್ಲಿದ್ದರು. ಏಪ್ರಿಲ್​ 1 ರಂದು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಿತು. ಅಲ್ಲಿ 39 ದಿನಗಳನ್ನು ಕಳೆದರು. ಇದೀಗ ಮತ್ತೊಮ್ಮೆ ಕೇಜ್ರಿವಾಲ್ ತಿಹಾರ್​ ಜೈಲಿಗೆ ಶರಣಾಗಬೇಕಿದೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ಗೆ ಇಡಿ 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಕೇಜ್ರಿವಾಲ್​ ಅಪರಾಧಿ ಎಂದು ಘೋಷಿಸಲಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್