ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್​ ಜೈಲಿಗೆ ತೆರಳಬೇಕಿದೆ. ಅವರ ಮಧ್ಯಂತರ ಜಾಮೀನು ಅವಧಿ ಮುಗಿದಿದೆ. ಅವರು 21 ದಿನಗಳ ಕಾಲ ಜಾಮೀನಿನ ಮೇಲೆ ಹೊರಗಿದ್ದರು.

ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?
ಅರವಿಂದ್ ಕೇಜ್ರಿವಾಲ್

Updated on: Jun 02, 2024 | 9:29 AM

ಒಂದೆಡೆ ಲೋಕಸಭಾ ಚುನಾವಣೆಯೂ ಮುಕ್ತಾಯಗೊಂಡಿದೆ, ಮತ್ತೊಂದೆಡೆ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ಜಾಮೀನು ಅವಧಿ ಕೂಡ ಅಂತ್ಯಗೊಂಡಿದ್ದು ಇಂದು ತಿಹಾರ್​ ಜೈಲಿಗೆ ಮರಳಲಿದ್ದಾರೆ. ಅದಕ್ಕೂ ಮುನ್ನ ತಮ್ಮ ಪಕ್ಷದ ನಾಯಕರೊಂದಿಗೆ ಚಿಂತನ-ಮಂಥನ ನಡೆಸಿದರು.

ಗಂಭೀರ ಅನಾರೋಗ್ಯದ ಶಂಕೆ ವ್ಯಕ್ತಪಡಿಸಿರುವ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್​ ಮೊರೆ ಹೋಗಿದ್ದರು, ಅರ್ಜಿಯ ಆದೇಶವನ್ನು ಕೋರ್ಟ್​ ಜೂನ್​ 5ಕ್ಕೆ ಮುಂದೂಡಿದೆ.

ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ತಿಹಾರ್ ಜೈಲಿಗೆ ಹೋಗುವ ಮೊದಲು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ, ಡಿಡಿಯು ಮಾರ್ಗದಲ್ಲಿರುವ ಪಕ್ಷದ ಕಚೇರಿ ಮತ್ತು ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಅವರು ತಮ್ಮ ಅನುಪಸ್ಥಿತಿಯಲ್ಲಿ ಪಕ್ಷದ ಒಗ್ಗಟ್ಟು ಕಾಪಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ

ಅರವಿಂದ್ ಕೇಜ್ರಿವಾಲ್​ 55 ದಿನಗಳ ಕಾಲ ಜೈಲಿನಲ್ಲಿದ್ದ ಬಳಿಕ ಮೇ 10ರಂದು ಜಾಮೀನಿನ ಮೇಲೆ ಹೊರಬಂದಿದ್ದರು. ಅವರು 10 ದಿನಗಳ ಕಾಲ ಇಡಿ ವಶದಲ್ಲಿದ್ದರು. ಏಪ್ರಿಲ್​ 1 ರಂದು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಿತು. ಅಲ್ಲಿ 39 ದಿನಗಳನ್ನು ಕಳೆದರು. ಇದೀಗ ಮತ್ತೊಮ್ಮೆ ಕೇಜ್ರಿವಾಲ್ ತಿಹಾರ್​ ಜೈಲಿಗೆ ಶರಣಾಗಬೇಕಿದೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ಗೆ ಇಡಿ 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಕೇಜ್ರಿವಾಲ್​ ಅಪರಾಧಿ ಎಂದು ಘೋಷಿಸಲಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us