AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ’: ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಮೋದಿ ಕಿಡಿ

ಬಿಹಾರದ ಅರಾರಿಯಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಮನಮೋಹನ್ ಸಿಂಗ್​ ಅವರು ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳಿಲ್ಲವೆಂದು ಕಾಂಗ್ರೆಸ್​ ಆರೋಪಿಸಿತ್ತು. ಆದರೆ, ಇಂದು ಅವರ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದ್ದು, ಅದರಲ್ಲಿ ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ’ ಎಂದು ಮನಮೋಹನ್ ಸಿಂಗ್ ಅವರು ಅದನ್ನೇ ಹೇಳಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ’: ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಮೋದಿ ಕಿಡಿ
ಪ್ರಧಾನಿ ಮೋದಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 26, 2024 | 10:14 PM

Share

ಬಿಹಾರ, ಏಪ್ರಿಲ್​ 26: ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಹಿಂದೆ, ಮನಮೋಹನ್ ಸಿಂಗ್ (Manmohan Singh) ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳುವ ಮೂಲಕ ಕಾಂಗ್ರೆಸ್​ ವಿರುದ್ಧ ಗುಡುಗಿದ್ದರು. ಇದೀಗ ಅದೇ ಮನಮೋಹನ್ ಸಿಂಗ್​ ಅವರ ಮತ್ತೊಂದು ಹಳೆಯ ವಿಡಿಯೋವೊಂದು ವೈರಲ್​ ಆಗಿದ್ದು ಆ ಕುರಿತಾಗಿ ಮತ್ತೆ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಮನಮೋಹನ್ ಸಿಂಗ್​ ಅವರು ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಯಾವತ್ತು ಹೇಳಿಲ್ಲವೆಂದು ಕಾಂಗ್ರೆಸ್​ ಆರೋಪಿಸಿತ್ತು. ಆದರೆ, ಇಂದು ಅವರ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದ್ದು, ಅದರಲ್ಲಿ ಅವರು ಅದನ್ನೇ ಹೇಳಿದ್ದಾರೆ. ಈ ಹಿಂದೆ ನನ್ನ ಹೇಳಿಕೆಯನ್ನು ಅಲ್ಲಗಳೆಯುತ್ತಿದ್ದ ಮಾಧ್ಯಮಗಳು ಈಗ ಮೌನವಹಿಸಿವೆ. ಯಾವುದೇ ಸೂಕ್ತ ಮಾಹಿತಿಯಿಲ್ಲದೆ ಅಥವಾ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಮಾಧ್ಯಮಗಳು ನನ್ನ ಮೇಲೆ ಹೇಗೆ ದಾಳಿ ಮಾಡುತ್ತಿವೆ ಎಂಬುದನ್ನು ನಾನು ನೋಡುತ್ತಿದ್ದೆ’ ಎಂದಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನಲ್ಲಿ ಮೊದಲು ಹಕ್ಕು, ಮೋದಿ ಹೇಳಿದ್ದು ಸತ್ಯ, ಸಾಕ್ಷ್ಯ ಕೊಟ್ಟ ಬಿಜೆಪಿ

‘ಕಾಂಗ್ರೆಸ್ ಮುಸ್ಲಿಂರಿಗೆ ಮಾತ್ರ ಆದ್ಯತೆ ನೀಡುತ್ತಿರುವ ಬಗ್ಗೆ ಮಾತನಾಡಿದಾಗ ಕೆಲವರು ತುಂಬಾ ಕೋಪಗೊಳ್ಳುತ್ತಾರೆ. ಕಳೆದ ವಾರದಿಂದ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದು ನಾನು ಅವರೆಲ್ಲರಿಗೂ ಒಂದು ಸವಾಲು ಹಾಕುತ್ತೇನೆ. ಮೊದಲು ನೀವು ಇದನ್ನು ಅರ್ಥಮಾಡಿಕೊಳ್ಳಿ, 25 ವರ್ಷಗಳು ಕಳೆದಿವೆ. ನೀವು ನನ್ನನ್ನು ಹೆದರಿಸಲು ಸಾಕಷ್ಟು ಪ್ರಯತ್ನಿಸಿದ್ದೀರಿ ಆದರೆ ಇಲ್ಲಿಯವರೆಗೆ ನೀವು ನನ್ನನ್ನು ಹೆದರಿಸಲು ಸಾಧ್ಯವಾಗಲಿಲ್ಲ. ಈಗ ಆ ಪ್ರಯತ್ನವನ್ನು ನಿಲ್ಲಿಸಿ’ ಎಂದು ಕಿಡಿಕಾರಿದ್ದಾರೆ.

ರಾಜಸ್ಥಾನದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಮೋದಿ, ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಪ್ರಣಾಳಿಕೆಯೂ ಅದನ್ನೇ ಹೇಳುತ್ತಿದೆ. ನಿಮ್ಮ ಸಂಪತ್ತನ್ನ ಯಾರಿಗೆ ಹೆಚ್ಚು ಮಕ್ಕಳಿದೆ ಅವರಿಗೆ ಹಂಚಲಿದ್ದಾರೆ. ನುಸುಳುಕೋರರಿಗೆ ಹಂಚಲಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮುಸ್ಲಿಂರ ಕುರಿತು ಮನಮೋಹನ್ ಸಿಂಗ್ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ರಶೀದ್ ಅಲ್ವಿ ಕಿಡಿ

ಮನಮೋಹನ್​​ ಸಿಂಗ್​​​ ಅವರ ಹಳೆಯ ಹೇಳಿಕೆಯನ್ನು ಇಟ್ಟುಕೊಂಡು ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್​​ಗೆ ತಿರುಗೇಟು ನೀಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅವರ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಆದ್ಯತೆ ಬಗ್ಗೆ ಬಿಜೆಪಿ ಒಂದು ವಿಡಿಯೋವೊಂದು ವೈರಲ್​​ ಮಾಡಿದೆ.

ಮುಸ್ಲಿಮರ ಬಗ್ಗೆ ಮನಮೋಹನ್‌ ಸಿಂಗ್‌ ಹೇಳಿದ್ದೇನು?

ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೇ ಮೊದಲ ಅಧಿಕಾರ ಇತ್ತು. ಕಾಂಗ್ರೆಸ್‌ನವರು ದೇಶದ ಸಂಪತ್ತನ್ನು ಒಟ್ಟುಗೂಡಿಸಿ ಅಕ್ರಮ ವಲಸಿಗರು, ಹೆಚ್ಚು ಮಕ್ಕಳನ್ನು ಹೊಂದಿರುವ ಸಮುದಾಯಕ್ಕೆ ನೀಡಲಿದೆ. ನಿಮ್ಮ ಶ್ರಮದ ಹಣವನ್ನು ಅಕ್ರಮ ವಲಸಿಗರಿಗೆ ನೀಡಬೇಕೆ? ನೀವು ಇದನ್ನು ಒಪ್ಪುವಿರೇ? ಕಾಂಗ್ರೆಸ್‌ ಪ್ರಣಾಳಿಕೆ ಇದನ್ನು ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು. ಇದೇ ವಿಡಿಯೋವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:11 pm, Fri, 26 April 24

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ