AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಇಂದು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ, ಸಾರ್ವಜನಿಕ ಸಭೆಯಲ್ಲಿ ಭಾಗಿ

ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್ 19 ರಂದು ಅವರು ಪಾಲಕ್ಕಾಡ್‌ಗೆ ಭೇಟಿ ನೀಡಲಿದ್ದು, ಅಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Lok Sabha Election: ಇಂದು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ, ಸಾರ್ವಜನಿಕ ಸಭೆಯಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on:Mar 15, 2024 | 10:44 AM

Share

ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೇರಳದ ಪಟ್ಟನಂತಿಟ್ಟಗೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ಬಿಜೆಪಿ ರಾಜ್ಯ ಮುಖ್ಯಸ್ಥ ಕೆ ಸುರೇಂದ್ರನ್, ಪಕ್ಷದ ಕೇರಳ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಮತ್ತು ಪತ್ತನಂತಿಟ್ಟ ಜಿಲ್ಲಾಧ್ಯಕ್ಷ ವಿಎ ಸೂರಜ್ ಅವರು ಪ್ರಧಾನಿಯನ್ನು ಬರಮಾಡಿಕೊಳ್ಳಲಿದ್ದಾರೆ. ಸಭೆಯಲ್ಲಿ ಎನ್‌ಡಿಎಯ ಲೋಕಸಭಾ ಅಭ್ಯರ್ಥಿಗಳಾದ ವಿ ಮುರಳೀಧರನ್ (ಅಟ್ಟಿಂಗಲ್), ಅನಿಲ್ ಕೆ ಆಂಟನಿ (ಪತ್ತನಂತಿಟ್ಟ), ಶೋಭಾ ಸುರೇಂದ್ರನ್ (ಆಲಪ್ಪುಳ), ಮತ್ತು ಬೈಜು ಕಲಾಸಾಲ (ಮಾವೇಲಿಕ್ಕಾರ) ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಪದ್ಮಜಾ ವೇಣುಗೋಪಾಲ್ ಸೇರಿದಂತೆ ಇತರ ನಾಯಕರು ಮತ್ತು ರಾಜ್ಯ ಮತ್ತು ಸ್ಥಳೀಯ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 39 ರ ಅಡಿಯಲ್ಲಿ ಪಟ್ಟಣಂತಿಟ್ಟ ಮುನ್ಸಿಪಲ್ ಸ್ಟೇಡಿಯಂ ಮತ್ತು ಪ್ರಮದಮ್ ಒಳಾಂಗಣ ಕ್ರೀಡಾಂಗಣದ 3 ಕಿಮೀ ವ್ಯಾಪ್ತಿಯೊಳಗೆ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ಮತ್ತಷ್ಟು ಓದಿ: ಮಾ.16 ರಂದು ಕಲಬುರಗಿಗೆ ಮೋದಿ, ಖರ್ಗೆ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ರಣಕಹಳೆ

ಮಾರ್ಚ್ 17 ರಂದು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪಟ್ಟಣಂತಿಟ್ಟ ಮತ್ತು ಮಾರ್ಚ್ 15 ರಂದು ಪಾಲಕ್ಕಾಡ್‌ಗೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೊದಲು ಹೇಳಿತ್ತು, ಆದರೆ ನಂತರ ಯೋಜನೆಯನ್ನು ಬದಲಾಯಿಸಲಾಯಿತು. ಮಾರ್ಚ್ 19 ರಂದು ಅವರು ಪಾಲಕ್ಕಾಡ್‌ಗೆ ಭೇಟಿ ನೀಡಲಿದ್ದು, ಅಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Fri, 15 March 24

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್