Lok Sabha Election: ಇಂದು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ, ಸಾರ್ವಜನಿಕ ಸಭೆಯಲ್ಲಿ ಭಾಗಿ

ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್ 19 ರಂದು ಅವರು ಪಾಲಕ್ಕಾಡ್‌ಗೆ ಭೇಟಿ ನೀಡಲಿದ್ದು, ಅಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Lok Sabha Election: ಇಂದು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ, ಸಾರ್ವಜನಿಕ ಸಭೆಯಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ

Updated on: Mar 15, 2024 | 10:44 AM

ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೇರಳದ ಪಟ್ಟನಂತಿಟ್ಟಗೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ಬಿಜೆಪಿ ರಾಜ್ಯ ಮುಖ್ಯಸ್ಥ ಕೆ ಸುರೇಂದ್ರನ್, ಪಕ್ಷದ ಕೇರಳ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಮತ್ತು ಪತ್ತನಂತಿಟ್ಟ ಜಿಲ್ಲಾಧ್ಯಕ್ಷ ವಿಎ ಸೂರಜ್ ಅವರು ಪ್ರಧಾನಿಯನ್ನು ಬರಮಾಡಿಕೊಳ್ಳಲಿದ್ದಾರೆ.
ಸಭೆಯಲ್ಲಿ ಎನ್‌ಡಿಎಯ ಲೋಕಸಭಾ ಅಭ್ಯರ್ಥಿಗಳಾದ ವಿ ಮುರಳೀಧರನ್ (ಅಟ್ಟಿಂಗಲ್), ಅನಿಲ್ ಕೆ ಆಂಟನಿ (ಪತ್ತನಂತಿಟ್ಟ), ಶೋಭಾ ಸುರೇಂದ್ರನ್ (ಆಲಪ್ಪುಳ), ಮತ್ತು ಬೈಜು ಕಲಾಸಾಲ (ಮಾವೇಲಿಕ್ಕಾರ) ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಪದ್ಮಜಾ ವೇಣುಗೋಪಾಲ್ ಸೇರಿದಂತೆ ಇತರ ನಾಯಕರು ಮತ್ತು ರಾಜ್ಯ ಮತ್ತು ಸ್ಥಳೀಯ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 39 ರ ಅಡಿಯಲ್ಲಿ ಪಟ್ಟಣಂತಿಟ್ಟ ಮುನ್ಸಿಪಲ್ ಸ್ಟೇಡಿಯಂ ಮತ್ತು ಪ್ರಮದಮ್ ಒಳಾಂಗಣ ಕ್ರೀಡಾಂಗಣದ 3 ಕಿಮೀ ವ್ಯಾಪ್ತಿಯೊಳಗೆ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ಮತ್ತಷ್ಟು ಓದಿ: ಮಾ.16 ರಂದು ಕಲಬುರಗಿಗೆ ಮೋದಿ, ಖರ್ಗೆ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ರಣಕಹಳೆ

ಮಾರ್ಚ್ 17 ರಂದು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪಟ್ಟಣಂತಿಟ್ಟ ಮತ್ತು ಮಾರ್ಚ್ 15 ರಂದು ಪಾಲಕ್ಕಾಡ್‌ಗೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೊದಲು ಹೇಳಿತ್ತು, ಆದರೆ ನಂತರ ಯೋಜನೆಯನ್ನು ಬದಲಾಯಿಸಲಾಯಿತು. ಮಾರ್ಚ್ 19 ರಂದು ಅವರು ಪಾಲಕ್ಕಾಡ್‌ಗೆ ಭೇಟಿ ನೀಡಲಿದ್ದು, ಅಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Fri, 15 March 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us