ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್ನವರು ಬರಲಿಲ್ಲ: ಮೋದಿ ಕಿಡಿ
ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಅನ್ಸಾರಿ ಕುಟುಂಬದ ಎರಡು ತಲೆಮಾರಿನವರು ಬಾಬರಿ ಮಸೀದಿಗಾಗಿ ಹಿಂದೂಗಳ ವಿರುದ್ಧ ನ್ಯಾಯಾಲಯದಲ್ಲಿ ಶತಮಾನಗಳ ಕಾಲ ಹೋರಾಟ ನಡೆಸಿದರು. ಆದರೆ ಸುಪ್ರೀಂ ಕೋರ್ಟ್ ಹಿಂದೂಗಳ ಪರವಾಗಿ ತೀರ್ಪು ನೀಡಿದಾಗ ಅವರು ಸಂತೋಷದಿಂದ ಸ್ವಾಗತಿಸಿದರು. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು ಆದರೆ ಕಾಂಗ್ರೆಸ್ನ ನಾಯಕರು ಮಾತ್ರ ಆಗಮಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ಬಾಬ್ರಿ ಮಸೀದಿ ಪರ ಅಂದು ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಲ್ಲಿ ಒಬ್ಬರಾದ ಇಕ್ಬಾಲ್ ಅನ್ಸಾರಿ (Iqbal Ansari) ಮತ್ತು ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಾಡಿಹೊಗಳಿದ್ದಾರೆ. ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಅನ್ಸಾರಿ ಕುಟುಂಬದ ಎರಡು ತಲೆಮಾರಿನವರು ಬಾಬರಿ ಮಸೀದಿಗಾಗಿ ಹಿಂದೂಗಳ ವಿರುದ್ಧ ನ್ಯಾಯಾಲಯದಲ್ಲಿ ಶತಮಾನಗಳ ಕಾಲ ಹೋರಾಟ ನಡೆಸಿದರು. ಆದರೆ ಸುಪ್ರೀಂ ಕೋರ್ಟ್ ಹಿಂದೂಗಳ ಪರವಾಗಿ ತೀರ್ಪು ನೀಡಿದಾಗ ಅವರು ಸಂತೋಷದಿಂದ ಸ್ವಾಗತಿಸಿದರು. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು ಆದರೆ ಕಾಂಗ್ರೆಸ್ನ ನಾಯಕರು ಮಾತ್ರ ಆಗಮಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ಶತಮಾನಗಳ ಕಾಲ ಹಿಂದೂಗಳ ವಿರುದ್ಧ ಹೋರಾಟ ಮಾಡಿದ್ದ ಇಕ್ಬಾಲ್ ಅನ್ಸಾರಿ ಮತ್ತು ಅವರ ಕುಟುಂಬಕ್ಕೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ನೀಡಲಾಗಿತ್ತು. ಅಷ್ಟೇ ಅಲ್ಲದೆ ಆಹ್ವಾನ ಸ್ವೀಕರಿಸಿದ್ದ ಇಕ್ಬಾಲ್ ಅನ್ಸಾರಿ ಅವರು ರಾಮಮಂದಿರ ಕಾರ್ಯಕ್ರಮಕ್ಕೆ ಸ್ವತಃ ಹಾಜರಾಗಿದ್ದರು. ಆ ಮೂಲಕ ಅವರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಒಪ್ಪಿಕೊಂಡಿದ್ದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.
VIDEO | “Two generations of Ansari family fought for Babri Masjid, against Hindus in the court. Iqbal Ansari and his family fought the battle for centuries, but when the Supreme Court decided in favour of Hindus, even they welcomed the verdict. Not just this, during the Ram… pic.twitter.com/hlHiOE4gPH
— Press Trust of India (@PTI_News) April 19, 2024
ಇಕ್ಬಾಲ್ ಅನ್ಸಾರಿ ಅವರಿಗೆ ಆಹ್ವಾನ ನೀಡಿದಂತೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಭಾರತ ಮೈತ್ರಿಕೂಟದ ನಾಯಕರಿಗೂ ರಾಮಮಂದಿರ ಟ್ರಸ್ಟ್‌ನಿಂದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನ ನೀಡಲಾಗಿತ್ತು. ಜೀವನಪರ್ಯಾಂತ ಬಾಬರಿ ಮಸೀದಿಗಾಗಿ ಹೋರಾಡಿದವರೇ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ನ ನಾಯಕರು ಮಾತ್ರ ಬರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಬಂದಿದ್ದ ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ: ಪ್ರಧಾನಿ ಮೋದಿ
ಕಾಂಗ್ರೆಸ್‌ಗೆ ತಾನು ಚುನಾವಣೆಯಲ್ಲಿ ಗೆಲ್ಲಲ್ಲುವುದಿಲ್ಲ ಎಂದು ತಿಳಿದಿದೆ. ಆದ್ದರಿಂದ ಚುನಾವಣಾ ಫಲಿತಾಂಶದ ನಂತರ ದೇಶವು ಹೊತ್ತಿ ಉರಿಯುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:19 pm, Fri, 19 April 24