Lok Sabha Elections: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಂದು ಇಂಡಿಯ ಬ್ಲಾಕ್ ಸಭೆ

ಪ್ರತಿಪಕ್ಷಗಳ ನೇತೃತ್ವದ ಇಂಡಿಯ ಬ್ಲಾಕ್ ಇಂದು ನವದೆಹಲಿಯಲ್ಲಿ ಸಭೆ ಸೇರಲಿದೆ. ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್ ಮತ್ತು ಜಾರ್ಖಂಡ್ ಸಿಎಂ ಚಂಪೈ ಸೊರೆನ್ ಅವರಂತಹ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

Lok Sabha Elections: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಂದು ಇಂಡಿಯ ಬ್ಲಾಕ್ ಸಭೆ
ಇಂಡಿಯ ಬ್ಲಾಕ್
Follow us
ಸುಷ್ಮಾ ಚಕ್ರೆ
|

Updated on: Jun 01, 2024 | 3:31 PM

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ (Lok Sabha Election Results) ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಇಂದು ಇಂಡಿಯ (INDIA) ಬ್ಲಾಕ್ ನಾಯಕರು ಸಭೆ ನಡೆಸಲಿದ್ದಾರೆ. ಟಿಎಂಸಿ ಮತ್ತು ಪಿಡಿಪಿ ಸಭೆಯಿಂದ ಹೊರಗುಳಿಯಲು ಸಿದ್ಧವಾಗಿದ್ದರೂ, ಜೂನ್ 4ರಂದು ಮತ ಎಣಿಕೆಗೆ ತಮ್ಮ ಕಾರ್ಯತಂತ್ರವನ್ನು ಚರ್ಚಿಸಲು ಇಂಡಿಯ ಬಣದ ಹಿರಿಯ ನಾಯಕರು ಇಂದು ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಕಾಂಗ್ರೆಸ್, ಸಿಪಿಐಎಂ, ಸಿಪಿಐ, ಡಿಎಂಕೆ, ಎಐಡಿಎಂಕೆ, ಆರ್‌ಜೆಡಿ, ಶಿವಸೇನೆ ಮತ್ತು ಎನ್‌ಸಿಪಿಯ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಇರುವುದರಿಂದ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗುವುದಿಲ್ಲ ಎಂದು ಈಗಾಗಲೇ ಹೇಳಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಪ್ರತಿಪಕ್ಷಗಳ ಮೈತ್ರಿಕೂಟದ ಎಲ್ಲಾ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Priyanka Gandhi: ಪ್ರಿಯಾಂಕಾ ಗಾಂಧಿ ಏಕೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರೂ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮ್ಮ ಪಕ್ಷದ ನಾಯಕ ಟಿ.ಆರ್ ಬಾಲು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

“ಜೂನ್ 4 ಭಾರತದಲ್ಲಿ ಹೊಸ ಉದಯಕ್ಕೆ ನಾಂದಿಯಾಗಲಿದೆ. ಇಂದಿನ ಇಂಡಿಯ ಬ್ಲಾಕ್ ನಾಯಕರ ಸಭೆಯಲ್ಲಿ ಡಿಎಂಕೆಯನ್ನು ನಮ್ಮ ಪಕ್ಷದ ಖಜಾಂಚಿ ಮತ್ತು ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿಆರ್ ಬಾಲು ಅವರು ಪ್ರತಿನಿಧಿಸಲಿದ್ದಾರೆ” ಎಂದು ಎಂಕೆ ಸ್ಟಾಲಿನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದು ಅನೌಪಚಾರಿಕ ಸಭೆಯಾಗಿದ್ದು, ಮತ ಎಣಿಕೆಯ ದಿನದಂದು ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಮತ್ತು ಇವಿಎಂಗಳ ಬಗ್ಗೆಯಾಗಲಿ ಅಥವಾ ನಮೂನೆ 17ಸಿ ಬಳಕೆಯಾಗಲಿ ಜನರು ಹೇಗೆ ಎಚ್ಚರದಿಂದಿರಬೇಕು ಎಂಬುದನ್ನು ಮಾತ್ರ ಚರ್ಚಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: Lok Sabha Elections 2024: ಇಂದು ಅಂತಿಮ ಹಂತದ ಲೋಕಸಭೆ ಚುನಾವಣೆ; 57 ಕ್ಷೇತ್ರಗಳಲ್ಲಿ ಮತದಾನ

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ವೈಯಕ್ತಿಕ ಕಾರಣಗಳಿಂದ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. “ನನ್ನ ತಾಯಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದರಿಂದ ನಾನು ಹೋಗದೇ ಇರಬಹುದು” ಎಂದು ಅವರು ಪಿಟಿಐಗೆ ತಿಳಿಸಿದರು.

ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಲೋಕಸಭೆ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತು ಸೋಲಿಸಲು ಒಟ್ಟು 28 ವಿರೋಧ ಪಕ್ಷಗಳು ಇಂಡಿಯ ಹೆಸರಿನಲ್ಲಿ ಬೃಹತ್ ಒಕ್ಕೂಟವನ್ನು ರಚಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ