18 ನೇ ಲೋಕಸಭೆ(Lok Sabha)ಯಲ್ಲಿ ಸಂಸತ್ತಿನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ, ಸ್ಪೀಕರ್ ಓಂ ಬಿರ್ಲಾ(Om Birla) ಅವರು ಪ್ರಮಾಣ ವಚನಕ್ಕೆ ಸಂಬಂಧಿಸಿದ ನಿಯಮಗಳನ್ನು ತಿದ್ದುಪಡಿ ಮಾಡಿದ್ದಾರೆ.
ಸದಸ್ಯರು ಪ್ರಮಾಣವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ, ಕೆಳಮನೆಯ ಕಾರ್ಯಚಟುವಟಿಕೆಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ನಿಯಂತ್ರಿಸಲು ಹೊಸ ಷರತ್ತು ಸೇರಿಸಲಾಯಿತು, ಇವುಗಳನ್ನು ನಿಯಮಗಳಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿಲ್ಲ.
ಕಳೆದ ವಾರ ಸಂಸದರು ಪ್ರಮಾಣವಚನ ಸ್ವೀಕರಿಸುವಾಗ ಕೆಲವರು ಜೈ ಹಿಂದೂ ರಾಷ್ಟ್ರ, ಜೈ ಸಂವಿಧಾನ ಎಂದು ಘೋಷಿಸಿದರೆ, ಅಸಾದುದ್ದೀನ್ ಓವೈಸಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ್ದರು, ಇದಕ್ಕೆ ಹಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು ಈ ಹಿನ್ನೆಲೆಯಲ್ಲಿ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದೆ.
ಹೊಸದಾಗಿ ಚುನಾಯಿತರಾದ ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸುವ ಪವಿತ್ರ ಸಂದರ್ಭವನ್ನು ರಾಜಕೀಯ ಸಂದೇಶ ರವಾನಿಸಲು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ಮತ್ತಷ್ಟು ಓದಿ:ಲೋಕಸಭೆಯ ಮೊದಲ ಅಧಿವೇಶನದಲ್ಲಿ ಉತ್ಪಾದಕತೆ ಶೇ 103 : ಸ್ಪೀಕರ್ ಓಂ ಬಿರ್ಲಾ
ಇಂತಹ ಘೋಷಣೆಗಳಿಂದಾಗಿ ಜೂನ್ 24 ಮತ್ತು 25 ರಂದು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸಂಸದರ ನಡುವೆ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು.
ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ಹೊರಬಿದ್ದಿದ್ದು, ಎನ್ಡಿಎ ಬಹುಮತ ಪಡೆದು, ಮಿತ್ರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಓಂ ಬಿರ್ಲಾ ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ