AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಸ್ಪೀಕರ್ ಓಂ ಬಿರ್ಲಾರಿಗೆ ಕೊರೊನಾ ಸೋಂಕು; ದೆಹಲಿಯ ಏಮ್ಸ್​ಗೆ ದಾಖಲು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಮೊದಲ ಅಲೆಯಲ್ಲಿ ಹಲವು ರಾಜಕಾರಣಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅದೆಷ್ಟೋ ಗಣ್ಯರನ್ನೂ ಬಲಿಪಡೆದಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 43,846 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾರಿಗೆ ಕೊರೊನಾ ಸೋಂಕು; ದೆಹಲಿಯ ಏಮ್ಸ್​ಗೆ ದಾಖಲು
ಲೋಕಸಭಾ ಸ್ಪೀಕರ್ ಓಂ ಬಿರ್ಲಾ
Lakshmi Hegde
|

Updated on: Mar 21, 2021 | 6:01 PM

Share

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಏಮ್ಸ್​ಗೆ ಕೊವಿಡ್​ -19 ಸೆಂಟರ್​ಗೆ ದಾಖಲಾಗಿದ್ದಾರೆ. ಓಂ ಬಿರ್ಲಾ ಅವರಲ್ಲಿ ಮಾ.19ರಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಮರುದಿನವೇ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್​ನ ಮಾಧ್ಯಮ ಮತ್ತು ಪ್ರೊಟೋಕಾಲ್​ ವಿಭಾಗದ ಮುಖ್ಯಸ್ಥರಾಗಿರುವ ಡಾ. ಆರ್ತಿ ವಿಜ್​ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಮೊದಲ ಅಲೆಯಲ್ಲಿ ಹಲವು ರಾಜಕಾರಣಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅದೆಷ್ಟೋ ಗಣ್ಯರನ್ನೂ ಬಲಿಪಡೆದಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 43,846 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. ಕಳೆದ ವರ್ಷ ನವೆಂಬರ್​ 25ರ ನಂತರ ಒಂದು ದಿನದಲ್ಲಿ ಇಷ್ಟು ಪ್ರಮಾಣದ ಸೋಂಕಿತರು ಪತ್ತೆಯಾಗಿದ್ದು ಇದೇ ಮೊದಲು. ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1.15ಕೋಟಿಗೆ ಏರಿಕೆಯಾಗಿದೆ. ಹಾಗೇ 3.09 ಲಕ್ಷದಷ್ಟು ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 1.11 ಕೋಟಿ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅದರಲ್ಲೂ ಮಹಾರಾಷ್ಟ್ರ, ಪಂಜಾಬ್​, ಕರ್ನಾಟಕ, ಕೇರಳಗಳಲ್ಲಿ ಕೊರೊನಾ ವೇಗವಾಗಿ ಪ್ರಸರಣ ಆಗುತ್ತಿದೆ. ಒಂದೆಡೆ ಲಸಿಕೆ ವಿತರಣೆ ನಡೆಯುತ್ತಿದ್ದರೂ, ಸೋಂಕಿನ ನಿಯಂತ್ರಣ ಕಷ್ಟವಾಗುತ್ತಿದೆ. ಸಾರ್ವಜನಿಕರು ಕೊರೊನಾ ನಿಯಂತ್ರಣ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯಬಾರದು. ಮಾಸ್ಕ್​ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಹೇಳಿದ್ದಾರೆ.

ಇದನ್ನೂ ಓದಿ: India vs England: ಏಕದಿನ ಸರಣಿಗಾಗಿ ಇಂಗ್ಲೆಂಡ್ ತಂಡ ಪ್ರಕಟ.. ರೂಟ್, ಆರ್ಚರ್ ಸರಣಿಯಿಂದ​ ಔಟ್!

ಮದುವೆಯಾಗಿ 5ನೇ ದಿನಕ್ಕೆ ಅತ್ತೆ ಮಗನೊಂದಿಗೆ ಓಡಿ ಹೋದ ಯುವತಿ; ನನಗೆ ಹೆಂಡ್ತಿ ಬೇಕು ಎಂದು ಪದೇಪದೆ ಠಾಣೆಗೆ ಹೋಗುತ್ತಿರುವ ಪತಿ

Follow Us
Lakshmi Hegde
Lakshmi Hegde
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್