ಶಶಿಕಲಾ ನಟರಾಜನ್, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
ಜೈಲಿನಲ್ಲಿ ಶಶಿಕಲಾ ನಟರಾಜನ್ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.
ಜೈಲಿನಲ್ಲಿ ಶಶಿಕಲಾ ನಟರಾಜನ್ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್(Sasikala Natarajan) ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು, ಕಾರಾಗೃಹ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪವಿದೆ.
ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವಿಡಿಯೋಗಳು ಭಾರೀ ಆಘಾತವನ್ನುಂಟು ಮಾಡಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.
ಮತ್ತಷ್ಟು ಓದಿ: Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ
ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ ಶಶಿಕಲಾ ಹಾಜರಾಗಿರಲಿಲ್ಲ. ಈ ವೇಳೆ ಶಶಿಕಲಾ ಕಡೆಯವರು ವೈಟಾ ಮುಂದೆ ಮಾತ್ರ ಹಾಜರಾಗಿದ್ದರು. ಉಳಿದ ಯಾವುದೇ ವಿಚಾರಣೆಗೆ ಶಶಿಕಲಾ ಮತ್ತು ಇಳವರಸಿ ಹಾಜರಾಗಿರಲಿಲ್ಲ.
ಇದರ ಬೆನ್ನಲ್ಲೇ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಶಶಿಕಲಾ ಹಾಗೂ ಇಳವರಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರೆಂಟ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿಗೆ ಜಾಮೀನಿಗೆ ಸಹಿ ಹಾಕಿದ ವ್ಯಕ್ತಿಗಳಿಗೂ ಲೋಕಾಯುಕ್ತ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ