ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ

|

Updated on: Sep 05, 2023 | 10:33 AM

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.

ಶಶಿಕಲಾ ನಟರಾಜನ್​, ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ​ ವಾರೆಂಟ್ ಜಾರಿ
ಶಶಿಕಲಾ
Image Credit source: Outlook
Follow us on

ಜೈಲಿನಲ್ಲಿ ಶಶಿಕಲಾ ನಟರಾಜನ್​ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್(Sasikala Natarajan) ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್​ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ , ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು, ಕಾರಾಗೃಹ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್​ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪವಿದೆ.

ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವಿಡಿಯೋಗಳು ಭಾರೀ ಆಘಾತವನ್ನುಂಟು ಮಾಡಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ ಶಶಿಕಲಾ ಹಾಜರಾಗಿರಲಿಲ್ಲ. ಈ ವೇಳೆ ಶಶಿಕಲಾ ಕಡೆಯವರು ವೈಟಾ ಮುಂದೆ ಮಾತ್ರ ಹಾಜರಾಗಿದ್ದರು. ಉಳಿದ ಯಾವುದೇ ವಿಚಾರಣೆಗೆ ಶಶಿಕಲಾ ಮತ್ತು ಇಳವರಸಿ ಹಾಜರಾಗಿರಲಿಲ್ಲ.

ಇದರ ಬೆನ್ನಲ್ಲೇ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಶಶಿಕಲಾ ಹಾಗೂ ಇಳವರಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರೆಂಟ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿಗೆ ಜಾಮೀನಿಗೆ ಸಹಿ ಹಾಕಿದ ವ್ಯಕ್ತಿಗಳಿಗೂ ಲೋಕಾಯುಕ್ತ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ