ಸೀಟು ಹಂಚಿಕೆ, ಕಾಂಗ್ರೆಸ್​ನಿಂದ ಅಂತರ ಕಾಯ್ದುಕೊಂಡ ಮಮತಾ, ಇಂಡಿಯಾ ಮೈತ್ರಿಯಿಂದ ಬೇರ್ಪಡುವ ತಯಾರಿಯೇ?

ಪ್ರಧಾನಿ ನರೇಂದ್ರ ಮೋದಿ(Narendra Modi) ಮೂರನೇ ಬಾರಿಗೆ ಪ್ರಧಾನಿಯಾಗುವುದನ್ನು ತಡೆಯಲು 28 ವಿರೋಧ ಪಕ್ಷಗಳೆಲ್ಲವೂ ಒಟ್ಟಾಗಿ ಆರಂಭಿಸಿದ್ದ ಇಂಡಿಯಾ(INDIA) ಮೈತ್ರಿ ಒಕ್ಕೂಟದ ರೆಕ್ಕೆಗಳು ಒಂದೊಂದಾಗಿಯೇ ಕಳಚುವ ಸಾಧ್ಯತೆ ಗೋಚರಿಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಕಾಂಗ್ರೆಸ್​ ಕರೆದಿದ್ದ ಸಭೆಯಿಂದ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿಂದೆಸರಿದಿದ್ದಾರೆ.

ಸೀಟು ಹಂಚಿಕೆ, ಕಾಂಗ್ರೆಸ್​ನಿಂದ ಅಂತರ ಕಾಯ್ದುಕೊಂಡ ಮಮತಾ, ಇಂಡಿಯಾ ಮೈತ್ರಿಯಿಂದ ಬೇರ್ಪಡುವ ತಯಾರಿಯೇ?
ಮಮತಾ ಬ್ಯಾನರ್ಜಿ
Follow us
ನಯನಾ ರಾಜೀವ್
|

Updated on: Jan 12, 2024 | 2:11 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಮೂರನೇ ಬಾರಿಗೆ ಪ್ರಧಾನಿಯಾಗುವುದನ್ನು ತಡೆಯಲು 28 ವಿರೋಧ ಪಕ್ಷಗಳೆಲ್ಲವೂ ಒಟ್ಟಾಗಿ ಆರಂಭಿಸಿದ್ದ ಇಂಡಿಯಾ(INDIA) ಮೈತ್ರಿ ಒಕ್ಕೂಟದ ರೆಕ್ಕೆಗಳು ಒಂದೊಂದಾಗಿಯೇ ಕಳಚುವ ಸಾಧ್ಯತೆ ಗೋಚರಿಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಕಾಂಗ್ರೆಸ್​ ಕರೆದಿದ್ದ ಸಭೆಯಿಂದ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿಂದೆಸರಿದಿದ್ದಾರೆ.

ಮುಕುಲ್ ವಾಸ್ನಿಕ್ ನೇತೃತ್ವದ ಕಾಂಗ್ರೆಸ್ ನ ಐವರು ಸದಸ್ಯರ ಸಮಿತಿಯು ಸೀಟು ಹಂಚಿಕೆಗಾಗಿ ಮಿತ್ರಪಕ್ಷಗಳೊಂದಿಗೆ ರಾಜ್ಯವಾರು ಮಾತುಕತೆ ನಡೆಸುತ್ತಿದೆ. ಹೀಗಾಗಿ ಮಮತಾ ಮೈತ್ರಿಕೂಟದಿಂದ ಬೇರ್ಪಡಲು ತಯಾರಿ ನಡೆಸುತ್ತಿದ್ದಾರಾ ಎನ್ನುವ ಪ್ರಶ್ನೆ ಕಾಡುತ್ತಿದೆ.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಾಂಗ್ರೆಸ್​ಗೆ 2 ಸ್ಥಾನಗಳನ್ನು ನೀಡಲು ಮುಂದಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭಾ ಸ್ಥಾನಗಳಿದ್ದು, ಟಿಎಂಸಿ ಸ್ವತಃ 40 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉತ್ಸಾಹದಲ್ಲಿದೆ ಮತ್ತು ಕಾಂಗ್ರೆಸ್‌ಗೆ ಕೇವಲ ಎರಡು ಸ್ಥಾನಗಳನ್ನು ಬಿಟ್ಟುಕೊಡುತ್ತಿದೆ. ಇದಕ್ಕೆ 7ರಿಂದ 8 ಸ್ಥಾನ ಬೇಕು ಎಂಬುದು ಕಾಂಗ್ರೆಸ್​ನ ವಾದವಾಗಿದೆ.

ಮತ್ತಷ್ಟು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆ ತಿರಸ್ಕರಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಬಂಗಾಳದೊಂದಿಗೆ ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಎಂಸಿ ಬಯಸಿದೆ. ಇದರಿಂದಾಗಿ ಟಿಎಂಸಿ ಮತ್ತು ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಮಮತಾ ಬ್ಯಾನರ್ಜಿ ಅವರ ಎರಡು ಸ್ಥಾನಗಳ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒಪ್ಪುವುದಿಲ್ಲ.

ಈ ಎರಡೂ ಸ್ಥಾನಗಳು ನಮ್ಮ ಬಳಿ ಇವೆ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದರು. ಅವರ ಅನುಕಂಪ ನಮಗೆ ಬೇಕಾಗಿಲ್ಲ. ನಾವು ಸ್ವಂತವಾಗಿ ಹೋರಾಡಬಹುದು. ಮಮತಾ ಬ್ಯಾನರ್ಜಿ ಏನು ಮಾಡಿದರೂ ಅವರು ಪ್ರಧಾನಿ ಮೋದಿಯ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ ಎಂದು ಅಧೀರ್ ಹೇಳಿದ್ದರು.

2019ರ ಫಲಿತಾಂಶವನ್ನು ನೋಡುವುದಾದರೆ, ರಾಜ್ಯದ 42 ಸ್ಥಾನಗಳಲ್ಲಿ, ಟಿಎಂಸಿ 22, ಬಿಜೆಪಿ 18 ಮತ್ತು ಕಾಂಗ್ರೆಸ್ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಎಡಪಕ್ಷಗಳಿಗೆ ಒಂದೇ ಒಂದು ಸ್ಥಾನವೂ ಸಿಕ್ಕಿರಲಿಲ್ಲ. ಈ ಆಧಾರದ ಮೇಲೆ, ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ಗೆ ಕೇವಲ ಎರಡು ಸ್ಥಾನಗಳನ್ನು ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ.

ಬಹರಂಪುರ ಮತ್ತು ಮಾಲ್ಡಾ ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಗೆಲ್ಲಲು ಸಾಧ್ಯವಾದರೆ ಉಳಿದ ಸ್ಥಾನಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಹಣಾಹಣಿ ಇತ್ತು. ಬಂಗಾಳದ 34 ಸ್ಥಾನಗಳಲ್ಲಿ ಕಾಂಗ್ರೆಸ್ ಶೇಕಡಾ ಹತ್ತಕ್ಕಿಂತ ಕಡಿಮೆ ಮತಗಳನ್ನು ಪಡೆದಿತ್ತು.

ಮಮತಾ ಮತ್ತು ಅಧೀರ್ ರಂಜನ್ ನಡುವೆ ರಾಜಕೀಯ ದ್ವೇಷ ಬಹಳ ಹಿಂದಿನಿಂದಲೂ ಇದೆ. ಅಧೀರ್ ರಂಜನ್ ಮೊದಲಿನಿಂದಲೂ ಮಮತಾ ಬ್ಯಾನರ್ಜಿ ಅವರೊಂದಿಗೆ ಮೈತ್ರಿಗೆ ಸಿದ್ಧರಿರಲಿಲ್ಲ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಮಮತಾ ಬ್ಯಾನರ್ಜಿ ಒಕ್ಕೂಟದಿಂದ ಹೊರಬರುವ ಲಕ್ಷಣ ಎದ್ದು ಕಾಣುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ