ವಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ

Election Laws (Amendment) Bill, 2021 ಮಸೂದೆಯನ್ನು ಮಂಡಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ಶಾಸನವು ದೇಶದಲ್ಲಿ ನಕಲಿ ಮತದಾನವನ್ನು ಕೊನೆಗೊಳಿಸುತ್ತದೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹಗೊಳಿಸುತ್ತದೆ ಎಂದು ಹೇಳಿದರು.

ವಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ
ಸಂಸತ್ ಭವನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 20, 2021 | 3:54 PM

ದೆಹಲಿ: ಮತದಾರರ ಪಟ್ಟಿಯನ್ನು(electoral rolls) ಆಧಾರ್ (Aadhaar) ಜತೆ ಜೋಡಿಸುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ( Election Laws Amendment Bill 2021)ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಲೋಕಸಭೆಯಲ್ಲಿ(Loksabha) ಸೋಮವಾರ ಅಂಗೀಕರಿಸಲ್ಪಟ್ಟಿತು. ಮಸೂದೆಯನ್ನು ಮಂಡಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು(Kiren Rijiju), ಈ ಶಾಸನವು ದೇಶದಲ್ಲಿ ನಕಲಿ ಮತದಾನವನ್ನು ಕೊನೆಗೊಳಿಸುತ್ತದೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹಗೊಳಿಸುತ್ತದೆ ಎಂದು ಹೇಳಿದರು. ಕಾಂಗ್ರೆಸ್, ಡಿಎಂಕೆ ಮತ್ತು ಟಿಎಂಸಿಯ ಸಂಸದರು ಸದನದ ಅಂಗಳದಲ್ಲಿ ನಿಂತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗಲೂ ರಿಜಿಜು ಮಸೂದೆಯನ್ನು ಮಂಡಿಸಿದರು. ಪ್ರತಿಪಕ್ಷಗಳ ಆಕ್ಷೇಪಣೆಗಳನ್ನು ಸರ್ಕಾರವು ತಪ್ಪು ಮತ್ತು ಆಧಾರರಹಿತ ಎಂದು ಕರೆದಿದೆ. ಸರ್ಕಾರವು ನಕಲಿ ಮತದಾನ ಮತ್ತು ನಕಲಿ ಮತದಾನವನ್ನು ನಿಲ್ಲಿಸಲು ಬಯಸುತ್ತದೆ, ಅಂತಹ ಕ್ರಮದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ವಾದ-ವಿವಾದ, ಘೋಷಣೆ- ಕೂಗು ಮುಂದುವರಿದಿದ್ದರಿಂದ ಸದನವನ್ನು ಸುಮಾರು ಎರಡು ಗಂಟೆಗಳ ಕಾಲ ಮುಂದೂಡಲಾಯಿತು.

ಆಧಾರ್ ವಾಸಸ್ಥಳದ ಪುರಾವೆಯಾಗಬೇಕಿತ್ತು, ಪೌರತ್ವದ ಪುರಾವೆ ಅಲ್ಲ. ನೀವು ಮತದಾರರಿಗೆ ಆಧಾರ್ ಕಾರ್ಡ್ ಕೇಳುತ್ತಿದ್ದರೆ, ನಿಮಗೆ ಸಿಗುವುದು ನಿವಾಸವನ್ನು ಪ್ರತಿಬಿಂಬಿಸುವ ದಾಖಲೆ ಮಾತ್ರ. ನೀವು ಪ್ರಜೆ ಅಲ್ಲದವರಿಗೆ ಮತದಾನದ ಹಕ್ಕನ್ನು ನೀಡುತ್ತಿದ್ದೀರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಲೋಕಸಭೆಯಲ್ಲಿ ಹೇಳಿದ್ದಾರೆ. “ಮತದಾನ ಕಾನೂನುಬದ್ಧ ಹಕ್ಕು. ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ತಪ್ಪು” ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಸೌಗತೋ ರಾಯ್, ಸರ್ಕಾರವು ಎಲ್ಲಾ ನಾಗರಿಕರಿಗೆ ಆಧಾರ್ ಕಾರ್ಡ್‌ಗಳನ್ನು ನೀಡುತ್ತದೆ. ಕೇಂದ್ರ ಸರ್ಕಾರವು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ, ನಾನು ಈ ಮಸೂದೆಯನ್ನು ವಿರೋಧಿಸುತ್ತೇನೆ ಎಂದಿದ್ದಾರೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ವಾಹನ ಚಲಾಯಿಸಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಪಕ್ಷ ಸಂಸದರು ನಿರಂತರ ಘೋಷಣೆ ಕೂಗಿ, ಪ್ರಸ್ತಾವಿತ ಚುನಾವಣಾ ಸುಧಾರಣೆಗಳಿಗೆ ತಮ್ಮ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರು.

ಎಐಎಂಐಎಂಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ದೊಡ್ಡ ತಪ್ಪು ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ನಾಗರಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ. ಆಧಾರ್ ಕಾರ್ಡ್‌ಗಳಲ್ಲಿ ಸುಮಾರು ಶೇ8ರಷ್ಟು ವ್ಯತ್ಯಾಸಗಳು ಮತ್ತು ಮತದಾರರ ಪಟ್ಟಿಯಲ್ಲಿ 3 ರಿಂದ ಶೇ4 ದೋಷಗಳು ಕಂಡುಬಂದಿವೆ. ಈ ಮಸೂದೆಯನ್ನು ಅಂಗೀಕರಿಸಿದರೆ ದೇಶದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಾರೆ ಎಂದು ಒವೈಸಿ ಹೇಳಿರುವಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

ಇದನ್ನೂ ಓದಿ: Aadhar- Voter ID Link: ಸ್ವತಃ ನೀವೇ ಆಧಾರ್ ಮತ್ತು ವೋಟರ್​ ಐಡಿಯನ್ನು ಲಿಂಕ್ ಮಾಡಬಹುದು; ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಇದನ್ನೂ ಓದಿ: ಕೇಂದ್ರದ ಹೊಸ ಚುನಾವಣಾ ಸುಧಾರಣೆಗಳು: ಐಡಿಯಾಗಿ ಆಧಾರ್ ಕಾರ್ಡ್, ನೋಂದಣಿಗೆ 4 ಬಾರಿ ಅವಕಾಶ

Published On - 3:28 pm, Mon, 20 December 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ