ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್​ ಬೆದರಿಕೆ, ಶಂಕಿತನ ಬಂಧನ

|

Updated on: Jun 25, 2024 | 12:16 PM

ಕೇರಳದ ಕೊಚ್ಚಿಯಿಂದ ಲಂಡನ್​ಗೆ ಹೊರಡಬೇಕಿದ್ದ ಏರ್​ ಇಂಡಿಯಾ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ(Bomb Threat) ಬಂದಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್​ ಬೆದರಿಕೆ, ಶಂಕಿತನ ಬಂಧನ
Follow us on

ಕೇರಳದ ಕೊಚ್ಚಿಯಿಂದ ಲಂಡನ್​ಗೆ ಹೊರಡಬೇಕಿದ್ದ ಏರ್​ ಇಂಡಿಯಾ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ(Bomb Threat) ಬಂದಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ವಿಮಾನದ ಮೇಲೆ ವ್ಯಾಪಕ ತಪಾಸಣೆ ನಡೆಸಿದ್ದು, ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ.

ಕೊಚ್ಚಿಯಿಂದ ಲಂಡನ್​ಗೆ ಹಾರಲು ಸಿದ್ಧತೆ ನಡೆಸಿದ್ದ ಏರ್ ಇಂಡಿಯಾ 149 ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿತ್ತು. ಕೊಚ್ಚಿ ಇಂಟರ್​ನ್ಯಾಷನಲ್​ ಏರ್​ಪೋರ್ಟ್​ನಲ್ಲಿ ತಪಾಸಣೆ ನಡೆಸಲಾಯಿತು. ಏರ್‌ಪೋರ್ಟ್ ಸೆಕ್ಯುರಿಟಿ ಗ್ರೂಪ್ (ASG-CISF), ಏರ್‌ಲೈನ್ ಭದ್ರತಾ ಸಿಬ್ಬಂದಿ ಮತ್ತು ಇನ್‌ಲೈನ್ ಬ್ಯಾಗೇಜ್ ಸ್ಕ್ರೀನಿಂಗ್ ಸಿಸ್ಟಮ್‌ಗಳಿಂದ ಸಂಪೂರ್ಣ ಭದ್ರತಾ ತಪಾಸಣೆಗಳನ್ನು ನಡೆಸಲಾಯಿತು.

ಮತ್ತಷ್ಟು ಓದಿ: Bomb Threat: ಮುಂಬೈನ 50 ಆಸ್ಪತ್ರೆಗಳು ಹಾಗೂ ಕಾಲೇಜುಗಳಿಗೆ ಬಾಂಬ್​ ಬೆದರಿಕೆ

ವಿಮಾನವನ್ನು ಪ್ರತ್ಯೇಕವಾದ ವಿಮಾನ ಪಾರ್ಕಿಂಗ್ ಪಾಯಿಂಟ್‌ಗೆ ಸ್ಥಳಾಂತರಿಸಲಾಯಿತು ಮತ್ತು ಸಮಗ್ರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು ಮತ್ತು ನಂತರ ಹಾರಾಟಕ್ಕೆ ಅವಕಾಶ ಮಾಡಿಕೊಡಲಾಯಿತು.

ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಮೂಲದ ಸುಹೈಬ್ ಕರೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು ಅವರನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ