AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ಗೆ ಪ್ರಧಾನಿ ಮೋದಿ ಭಾವುಕ ಪತ್ರ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬರುವಿಕೆಗಾಗಿ ಇಡೀ ಜಗತ್ತೇ ಉಸಿರು ಬಿಗಿ ಹಿಡಿದು ಕಾಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಭಾರತದ ಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪತ್ರ ಬರೆದಿದ್ದಾರೆ. ‘‘ನೀವು ಸಾವಿರಾರು ಮೈಲುಗಳಷ್ಟು ದೂರವಿದ್ದರೂ ಸದಾ ನಮ್ಮ ಹೃದಯಕ್ಕೆ ಹತ್ತಿರವಾಗಿರುತ್ತೀರಿ’’ ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ.

ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ಗೆ ಪ್ರಧಾನಿ ಮೋದಿ ಭಾವುಕ ಪತ್ರ
ನರೇಂದ್ರ ಮೋದಿ-ಸುನಿತಾ ವಿಲಿಯಮ್ಸ್​
ನಯನಾ ರಾಜೀವ್
|

Updated on: Mar 18, 2025 | 2:51 PM

Share

ನವದೆಹಲಿ, ಮಾರ್ಚ್​ 18: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬರುವಿಕೆಗಾಗಿ ಇಡೀ ಜಗತ್ತೇ ಉಸಿರು ಬಿಗಿ ಹಿಡಿದು ಕಾಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಭಾರತದ ಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪತ್ರ ಬರೆದಿದ್ದಾರೆ. ‘‘ನೀವು ಸಾವಿರಾರು ಮೈಲುಗಳಷ್ಟು ದೂರವಿದ್ದರೂ ಸದಾ ನಮ್ಮ ಹೃದಯಕ್ಕೆ ಹತ್ತಿರವಾಗಿರುತ್ತೀರಿ’’ ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿ ಮೈಕ್ ಮಾಸ್ಸಿಮಿನೊ ಮೂಲಕ ಸುನಿತಾಗೆ ಕಳುಹಿಸಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಪತ್ರವು 143 ಕೋಟಿ ಭಾರತೀಯರ ಹೆಮ್ಮೆಯನ್ನು ಪ್ರತಿಬಿಂಬಿಸುತ್ತದೆ. ಕೆಲವು ದಿನಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ಮಾಸ್ಸಿಮಿನೊ ಅವರನ್ನು ಭೇಟಿಯಾಗಿ ತಮ್ಮ ಭಾರತದ ಜನರ ಪರವಾಗಿ ಈ ಪತ್ರವನ್ನು ಸುನಿತಾಗೆ ತಲುಪಿಸಬೇಕೆಂದು ಮನವಿ ಮಾಡಿದ್ದರು.

ಅವರ ಸುರಕ್ಷಿತ ಮರಳುವಿಕೆಗೆ ಹಾರೈಸುತ್ತಾ ಪ್ರಧಾನಿ ಮೋದಿ ಭಾರತದ ಶ್ರೇಷ್ಠ ಮಗಳೊಂದಿಗಿನ ಆಳವಾದ ಬಾಂಧವ್ಯವನ್ನು ಪುನರುಚ್ಚರಿಸಿದರು. ಈ ಕುರಿತು ಸಚಿವ ಜಿತೇಂದ್ರ ಸಿಂಗ್ ಪ್ರಧಾನಿ ಮೋದಿಯವರ ಪತ್ರವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಓದಿ: ಭೂಮಿಗೆ ಬರುವುದಿನ್ನು ಕನಸು ಎಂದುಕೊಂಡಿದ್ದ ಸುನಿತಾ ವಿಲಿಯಮ್ಸ್​ ಬರುವ ದಿನಾಂಕ ಫಿಕ್ಸ್​

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಇಂದೇ ಮರಳಲಿದ್ದಾರೆ. ಈ ಇಬ್ಬರು ಮತ್ತು ಇತರ ಇಬ್ಬರು ಗಗನಯಾತ್ರಿಗಳು ಮಂಗಳವಾರ ಸಂಜೆ ಭೂಮಿಗೆ ಮರಳಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮತ್ತು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಫ್ಲೋರಿಡಾ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆಯಲ್ಲಿ ಇಳಿಯಬಹುದು ಎಂದು ನಾಸಾ ತಿಳಿಸಿದೆ. ಮೊದಲು ಅವರು ಬುಧವಾರ ಭೂಮಿಗೆ ಮರಳುವ ನಿರೀಕ್ಷೆಯಿತ್ತು.

ಪ್ರಧಾನಿ ಮೋದಿ ಪತ್ರ

ಸದ್ಯ ಕಳೆದ 9 ತಿಂಗಳಿನಿಂದ ಬಾಹ್ಯಾಕಾಶದಲ್ಲಿರುವ ಈ ಇಬ್ಬರು ಭೂಮಿಗೆ ಬಂದ ಮೇಲೆ ಇಲ್ಲಿನ ವಾತಾವರಣಕ್ಕೆ ಒಡ್ಡಿಕೊಳ್ಳುವುದಕ್ಕೆ ಸಮಸ್ಯೆ ಆಗಲಿದೆ. ಇದರಿಂದ ವಿಲಿಯಮ್ಸ್, ವಿಲ್ಮೋರ್ ಇಬ್ಬರು ದೈಹಿಕ ತೊಂದರೆಗಳನ್ನ ಎದುರಿಸಲಿದ್ದಾರೆ. ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆ ಭಾನುವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!