ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮೂಲಭೂತ ಹಕ್ಕು ಅಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

| Updated By: Lakshmi Hegde

Updated on: May 06, 2022 | 1:57 PM

ಇರ್ಫಾನ್​ ಎಂಬುವರು ತನ್ನ ಹಳ್ಳಿಯಲ್ಲಿರುವ ಮಸೀದಿಗಳಲ್ಲಿ ಆಜಾನ್ ವೇಳೆ ಧ್ವನಿವರ್ಧಕ ಬಳಕೆ ಮಾಡಲು ಅವಕಾಶ ಕೊಡಬೇಕು ಎಂದು ಮನವಿ ಮಾಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮೂಲಭೂತ ಹಕ್ಕು ಅಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು
ಅಲಹಾಬಾದ್​ ಹೈಕೋರ್ಟ್​
Follow us on

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನುಅಳವಡಿಸುವುದು ಮೂಲಭೂತ ಹಕ್ಕು ಅಲ್ಲ. ಹಾಗೇ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆ ಮಾಡುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂಬುದನ್ನು ಕಾನೂನು ಸ್ಪಷ್ಟವಾಗಿ ಹೇಳುತ್ತದೆ ಎಂದು ಅಲಹಾಬಾದ್ ಹೈಕೋರ್ಟ್​ ಹೇಳಿದೆ.  ಈಗ ಉತ್ತರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಇನ್ನೂ ಕೆಲವು ರಾಜ್ಯಗಳಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡುವ ಸಂಬಂಧ ವಿವಾದ ಶುರುವಾಗಿದೆ. ಅದರಲ್ಲೂ ಉತ್ತರ ಪ್ರದೇಶದಲ್ಲಂತೂ ಮಸೀದಿ, ದೇಗುಲಗಳಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಧ್ವನಿವರ್ಧಕಗಳನ್ನೆಲ್ಲೆ ಸಿಎಂ ಯೋಗಿ ಆದಿತ್ಯನಾಥ್​ ಅವರೇ ತೆಗೆಸಿಹಾಕಿದ್ದಾರೆ. 

ಈ ಮಧ್ಯೆ ಇರ್ಫಾನ್​ ಎಂಬುವರು ತನ್ನ ಹಳ್ಳಿಯಲ್ಲಿರುವ ಮಸೀದಿಗಳಲ್ಲಿ ಆಜಾನ್ ವೇಳೆ ಧ್ವನಿವರ್ಧಕ ಬಳಕೆ ಮಾಡಲು ಅವಕಾಶ ಕೊಡಬೇಕು ಎಂದು ಮನವಿ ಮಾಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ  ನ್ಯಾಯಮೂರ್ತಿಗಳಾದ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾ. ವಿಕಾಸ್ ಬುದ್ವಾರ್​,  ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಮೂಲಭೂತವಾದ ಹಕ್ಕಲ್ಲ ಎಂಬ ಕಾನೂನನ್ನು ಸ್ಥಾಪಿಸಲಾಗಿದೆ. ಅಲ್ಲದೆ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಯಾಕಾಗಿ ಅನುಮತಿ ಕೊಡಬೇಕು ಎಂಬುದನ್ನು ಸಮರ್ಥಿಸಿಕೊಳ್ಳಲು ಈ ಅರ್ಜಿ ವಿಫಲವಾಗಿದೆ.  ಹಾಗಾಗಿ ವಜಾಗೊಳಿಸುತ್ತಿದ್ದೇವೆ ಎಂದೂ ತಿಳಿಸಿದ್ದಾರೆ.

ಇರ್ಫಾನ್ ಮೂಲತಃ ಉತ್ತರ ಪ್ರದೇಶದ ಧೋರನ್​ಪುರ ಎಂಬ ಹಳ್ಳಿಯವರು. ಇಲ್ಲಿರುವ ನೂರಿ ಮಸೀದಿಯಲ್ಲಿ ಧ್ವನಿವರ್ಧಕ ಅಳವಡಿಸಲು ಅನುಮತಿ ಕೊಡಬೇಕು ಎಂದು 2021ರಲ್ಲಿ ಮೊದಲು ಬದೌನ್​ ಜಿಲ್ಲೆಯ ಬಿಸೌಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್​ (SDM)ನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗ ಅಲ್ಲಿ ಕೂಡ ನಿರಾಕರಿಸಲಾಗಿತ್ತು. ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆಗೆ ಅನುಮತಿ ಕೊಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಅದನ್ನು ಪ್ರಶ್ನಿಸಿ ಇರ್ಫಾನ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಇದು ರಾಜಕೀಯ ಕೊಲೆ ಎಂದ ದಿಲೀಪ್ ಘೋಷ್