ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ

ಪ್ರೇಮ ವಿವಾಹವಾಗಿ ನಾಲ್ಕೇ ತಿಂಗಳಿಗೆ ಕಾನ್ಪುರದಲ್ಲಿ ದುರಂತ ಸಂಭವಿಸಿದೆ. ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಅನುಮಾನಗೊಂಡ ಪತಿ, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೂವರು ಪುರುಷರೊಂದಿಗೆ ಪತ್ನಿ ಕಂಡುಬಂದ ನಂತರ ಈ ಘಟನೆ ನಡೆದಿದೆ. ಕೊಲೆಯಾದ ನಂತರ ಪತಿ ತಾನೇ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಇದು ಕುಟುಂಬದಲ್ಲಿ ಆಘಾತ ಮೂಡಿಸಿದೆ.

ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ
ಆರೋಪಿ ಸಚಿನ್

Updated on: Jan 21, 2026 | 9:30 AM

ಕಾನ್ಪುರ, ಜನವರಿ 21: ಇಬ್ಬರದ್ದೂ ಪ್ರೇಮ ವಿವಾಹ(Love Marriage), ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾಗಿದ್ದರು. ಹಾಲು,ಜೇನಿನಂತೆ ಸುಖವಾಗಿ ಸಂಸಾರ ಮಾಡಿಕೊಂಡಿರಬೇಕಾದ ಮಹಿಳೆ ಪರ ಪುರುಷರ ಸಂಗ ಮಾಡಿ ಕೊಲೆಯಾಗಿದ್ದಾಳೆ. ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು ಕಳೆದಿತ್ತು, ಪತಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ತನ್ನ ಪತ್ನಿ ಮೂವರು ಪುರುಷರೊಂದಿಗೆ ಮಲಗಿದ್ದನ್ನು ನೋಡಿ ಆಘಾತಕ್ಕೊಳಗಾದ ಪತಿ ಬೇರೆ ಆಲೋಚನೆಯನ್ನೇ ಮಾಡದೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

ಮೃತದೇಹವನ್ನು ಕಂಬಳಿಯಲ್ಲಿ ಸುತ್ತಿ ಮರುದಿನ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಸಚಿನ್ ಸಿಂಗ್ ಕಳೆದ ಒಂದು ತಿಂಗಳಿನಿಂದ ತನ್ನ ಪತ್ನಿ ಶ್ವೇತಾ ಸಿಂಗ್ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರುತಮ್ಮ ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದರು ಮತ್ತು ನ್ಯಾಯಾಲಯದಲ್ಲಿ ತಮ್ಮ ಮದುವೆಯನ್ನು ನೋಂದಾಯಿಸಿದ್ದರು.

ಮತ್ತಷ್ಟು ಓದಿ: ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಅಗತ್ಯವೇ? ಭಾರತೀಯ ಕಾನೂನು ಹೇಳೋದೇನು?

ಸಚಿನ್ ಪೊಲೀಸರಿಗೆ ನೀಡಿದ ಹೇಳಿಕೆಯ ಪ್ರಕಾರ, ತನ್ನ ಹೆಂಡತಿಯ ನಡವಳಿಕೆಯ ಬಗ್ಗೆ ಅನುಮಾನ ಮೂಡಿತ್ತು. ತಾನು ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ, ಮಹಾರಾಜಪುರದ ಎಂಜಿನಿಯರಿಂಗ್ ಕಾಲೇಜು ಬಳಿ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಆಕೆ ಸಂಬಂಧ ಬೆಳೆಸಿಕೊಂಡಿದ್ದಳು ಎಂದು ಪತಿ ಆರೋಪಿಸಿದ್ದಾರೆ.

ಎರಡು ದಿನಗಳ ಹಿಂದೆ ತನ್ನ ಪತ್ನಿಗೆ ತಾನು ಹಳ್ಳಿಗೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದಾಗಿಯೂ, ಆ ರಾತ್ರಿ ಹಿಂತಿರುಗಲಿಲ್ಲವೆಂದು ಹೇಳಿ ಮನೆಗೆ ಬಂದಿದ್ದಾಗಿಯೂ ಸಚಿನ್ ಪೊಲೀಸರಿಗೆ ತಿಳಿಸಿದ್ದಾರೆ. ರಾತ್ರಿ ಅನಿರೀಕ್ಷಿತವಾಗಿ ಹಿಂತಿರುಗಿದಾಗ ತನ್ನ ಪತ್ನಿ ಇಬ್ಬರು ಪುರುಷರೊಂದಿಗೆ ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಿದ್ದಾಗಿ ಹೇಳಿಕೊಂಡಿದ್ದಾರೆ.

ತನ್ನ ಮೊಬೈಲ್ ಫೋನ್‌ನಲ್ಲಿ ವೀಡಿಯೊ ರೆಕಾರ್ಡ್ ಮಾಡಲು ಪ್ರಾರಂಭಿಸಿದೆ, ನಂತರ ತನ್ನ ಪತ್ನಿ ಆ ವ್ಯಕ್ತಿಗಳನ್ನು ತನ್ನ ಮೇಲೆ ಹಲ್ಲೆ ಮಾಡಿದ್ದರು ಎಂದರು. ಪೊಲೀಸರು ಎಲ್ಲರನ್ನೂ ಠಾಣೆಗೆ ಕರೆದುಕೊಂಡು ಹೋಗಿದ್ದರು. ಸಚಿನ್ ಅಧಿಕಾರಿಗಳಿಗೆ ಈ ವಿಷಯವನ್ನು ಮುಂದುವರೆಸಲು ಇಷ್ಟವಿಲ್ಲ ಇದನ್ನು ಪರಿಹರಿಸಲು ಬಯಸುತ್ತೇನೆ ಎಂದು ಹೇಳಿ ಮನೆಗೆ ಬಂದಿದ್ದರು.

ಮನೆಗೆ ಹಿಂದಿರುಗಿದ ನಂತರ, ಪತ್ನಿ ಆತನನ್ನು ಬಿಟ್ಟು ಆ ಇಬ್ಬರೊಂದಿಗೆ ವಾಸಿಸುವುದಾಗಿ ಬೆದರಿಕೆ ಹಾಕಿದ್ದಳು ನಂತರ ಇಬ್ಬರ ನಡುವೆ ಜಗಳ ನಡೆದಿತ್ತು. ಕೋಪದ ಭರದಲ್ಲಿ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದನೆಂದು ಸಚಿನ್ ಹೇಳಿದ್ದಾನೆ. ಆಕೆಯ ದೇಹವನ್ನು ಕಂಬಳಿಯಲ್ಲಿ ಸುತ್ತಿ ಬಾಡಿಗೆ ಕೋಣೆಯಲ್ಲಿ ಬಿಟ್ಟು ಹೋಗಿದ್ದ.

ಮರುದಿನ, ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಕಂಬಳಿಯಲ್ಲಿ ಶವ ಪ್ತತೆಯಾಗಿತ್ತು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಲಾಗಿದೆ. ಮೃತದೇಹದ ಪ್ರಾಥಮಿಕ ಪರೀಕ್ಷೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ