ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ಕೇಂದ್ರ ಸರ್ಕಾರವು ಎಲ್‌ಪಿಜಿ ಕೊರತೆಯಿಂದ ಬಳಲುತ್ತಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು ಅನಿಲ ಹಂಚಿಕೆಯನ್ನು ಮಾರ್ಚ್ 23, 2026ರಿಂದ ಜಾರಿಗೆ ಬರುವಂತೆ ನಿರ್ಧರಿಸಿದೆ. ಇದರಿಂದ ಒಟ್ಟು ಹಂಚಿಕೆ ಶೇ. 50ಕ್ಕೆ ತಲುಪಲಿದೆ. ಸಮುದಾಯ ಅಡುಗೆ ಮನೆಗಳು ಮತ್ತು ವಲಸೆ ಕಾರ್ಮಿಕರಿಗೆ 5 ಕೆಜಿ ಸಿಲಿಂಡರ್‌ಗಳಿಗೂ ಆದ್ಯತೆ ನೀಡಲಾಗಿದೆ. ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ
ಸಾಂದರ್ಭಿಕ ಚಿತ್ರ
Image Credit source: AI image

Updated on: Mar 21, 2026 | 7:34 PM

ದೆಹಲಿ, ಮಾ.21: ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ.

ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ (Community Kitchens) ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗ್ಯಾಸ್ ಟ್ರಬಲ್: ಹೋಟೆಲ್ ಮಾಲೀಕರು ವಿಲ ವಿಲ; ಸೌದೆ ಒಲೆ ದರ ದುಪ್ಪಟ್ಟು

ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ (FTL) ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕೇಂದ್ರ ಆದೇಶ ಸ್ವಾಗತಿಸಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್ 

ಹೋಟೆಲ್ ಗಳಿಗೆ ಕೇಂದ್ರದಿಂದ 20% ನಷ್ಟು ಹೆಚ್ಚುವರಿ ಗ್ಯಾಸ್ ಸಿಲಿಂಡರ್ ಗೆ ಆದೇಶ ಹಿನ್ನಲೆಯಲ್ಲಿ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ನಿಂದ ಸ್ವಾಗತ ಎಂದು ಹೇಳಿದೆ. ಒಟ್ಟು 50% ಕರ್ಮಷಿಯಲ್ ಸಿಲಿಂಡರ್ ಸಿಗಲಿದೆ‌. ಸೋಮವಾರದಿಂದ ಹೋಟೆಲ್ ಗಳು ಚೇತರಿಸಿಕೊಳ್ಳಲಿವೆ. ಸ್ವಲ್ಪ ‌ಮಟ್ಟಿಗೆ ಪರಿಹಾರ ಸಿಕ್ಕ ಹಾಗೆ ಆಗಿದೆ. ಕ್ಲೋಸ್ ಆದ ಹೋಟೆಲ್ ಗಳು ತೆರೆಯಲಿವೆ ಹೋಟೆಲ್ ನ ಒಂದೊಂದೇ ಮೆನುಗಳು ಆರಂಭವಾಗಲಿವೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 6:49 pm, Sat, 21 March 26

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us