ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಅಣ್ಣ-ತಂಗಿ ಸಾವು

ವಾರಾಣಸಿಯಲ್ಲಿ ದುರಂತ ಘಟನೆಯೊಂದು ನಡೆದಿದೆ. ಮನೆಯೊಳಗೆ ಅಡುಗೆ ಮಾಡುತ್ತಿದ್ದಾಗ ಅಣ್ಣ-ತಂಗಿ ಮೃತಪಟ್ಟಿದ್ದಾರೆ. ಅವರ ಮನೆ ಸಂಪೂರ್ಣವಾಗಿ ಧ್ವಂಸವಾಗಿದೆ. ಅವರ ತಾಯಿ ಮತ್ತು ಇನ್ನೊಬ್ಬ ತಮ್ಮ ಅವಶೇಷಗಳಡಿ ಸಿಕ್ಕಿಬಿದ್ದಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಅಡುಗೆ ತಯಾರಿಸುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಇಡೀ ಮನೆ ಕುಸಿದು ಬಿದ್ದಿದೆ. ಸಹೋದರ ಮತ್ತು ಸಹೋದರಿ ಹೊರಗೆ ಬರಲಾಗದೆ ಸಾವನ್ನಪ್ಪಿದ್ದಾರೆ.

ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಅಣ್ಣ-ತಂಗಿ ಸಾವು
LPG Cylinder
Image Credit source: PTI

Updated on: Mar 24, 2026 | 3:41 PM

ವಾರಾಣಸಿ, ಮಾರ್ಚ್ 24: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ. ಇಂದು ವಾರಾಣಸಿಯ (Varanasi) ಲಹರ್ತಾರಾ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದ ನಂತರ ಮನೆ ಕುಸಿದು 30 ವರ್ಷದ ವ್ಯಕ್ತಿ ಮತ್ತು ಅವರ ತಂಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಎಲ್​ಪಿಜಿ ಸಿಲಿಂಡರ್ ಸ್ಫೋಟದಿಂದಾಗಿ ಮನೆ ಕುಸಿದು ಇಡೀ ಕುಟುಂಬದ ಸದಸ್ಯರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು.

ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಂಡಗಳು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಗಿರಿಜಾ ದೇವಿ, ಅವರ ಇಬ್ಬರು ಪುತ್ರರು ಮತ್ತು ಮಗಳನ್ನು ಅವಶೇಷಗಳಿಂದ ಹೊರಗೆಳೆದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಗಿರಿಜಾ ದೇವಿ ಮತ್ತು ಅವರ ಒಬ್ಬ ಪುತ್ರ ಗಾಯಗೊಂಡಿದ್ದು, ಅವರ ಇನ್ನೊಬ್ಬ ಮಗ ಅಮನ್ ಚೌಧರಿ (30) ಮತ್ತು ಮಗಳು ಪ್ರೀತಿ (28) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ರಾತ್ರಿಯಿಂದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗುತ್ತಿದ್ದು, ಗಿರಿಜಾ ದೇವಿ ಬೆಳಿಗ್ಗೆ ಸ್ಟೌವ್ ಹಚ್ಚಲು ಹೋದಾಗ ಅದು ಸ್ಫೋಟಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಕಾಶಿ ವಿಶ್ವನಾಥ ದೇವಸ್ಥಾನದಿಂದ ಸುಮಾರು 7 ಕಿಲೋಮೀಟರ್ ದೂರದಲ್ಲಿರುವ ಲಹರ್ತಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಎಷ್ಟು ತೀವ್ರವಾಗಿತ್ತು ಎಂದರೆ ಹತ್ತಿರದ ಹಲವಾರು ಮನೆಗಳಲ್ಲಿಯೂ ಬಿರುಕುಗಳು ಉಂಟಾಗಿವೆ. ಭಯಭೀತರಾಗಿ ಅಕ್ಕಪಕ್ಕದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದು ರಕ್ಷಣಾ ಕಾರ್ಯಗಳಿಗೆ ಸಹಾಯ ಮಾಡಲು ಒಟ್ಟುಗೂಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us