AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್​​​ನಲ್ಲಿ ಮಹತ್ವದ ಬದಲಾವಣೆ

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಗೃಹಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲಾಗುವುದು. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಹೊಸ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ.

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್​​​ನಲ್ಲಿ ಮಹತ್ವದ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 09, 2026 | 9:06 PM

Share

ನವದೆಹಲಿ ಮಾ.9: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳಿಗೆ ಮುಂದಾಗಿದೆ. ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು (Hoarding) ಮಾಡುವುದನ್ನು ತಡೆಯಲು, ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. “ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಹೆಣ್ಮಕ್ಕಳಿಗೆ ಸರ್ಕಾರದಿಂದ ಬಂಪರ್ ಪ್ಯಾಕೇಜ್: ಜನನದಿಂದ ಪದವಿಯವರೆಗೆ ಸಿಗಲಿದೆ 25 ಸಾವಿರ ರೂ.

ಇಲ್ಲಿದೆ ಪೋಸ್ಟ್​​:

ದೇಶೀಯ ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವಂತೆ ಸರ್ಕಾರ ಆದೇಶಿಸಿದೆ. ಗ್ಯಾಸ್ ಪೂರೈಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಹೊಸ ದೇಶಗಳೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಎಂದು ಮೂಲಗಳು ತಿಳಿಸಿವೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Mon, 9 March 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್